nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫಲಪುಷ್ಪ ಪ್ರದರ್ಶನದಲ್ಲಿ ಅನಾವರಣಗೊಂಡ ಸರ್ವ ಧರ್ಮ ಗುರುಪರಂಪರೆ….
    ತುಮಕೂರು January 28, 2025

    ಫಲಪುಷ್ಪ ಪ್ರದರ್ಶನದಲ್ಲಿ ಅನಾವರಣಗೊಂಡ ಸರ್ವ ಧರ್ಮ ಗುರುಪರಂಪರೆ….

    By adminJanuary 28, 2025No Comments2 Mins Read
    tumakuru

    ತುಮಕೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ತೋಟಗಾರಿಕಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವದ ಹಿನ್ನೆಲೆ ತುಮಕೂರು ನಗರದಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ  ಸರ್ವ ಧರ್ಮ ಗುರುಪರಂಪರೆಯನ್ನು ನೆನಪಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ .

    ಫಲಪುಷ್ಪ ಪ್ರದಶನದಲ್ಲಿ ಗುರುಪರಂಪರೆಯನ್ನು ಪರಿಚಯಿಸುವ ಪ್ರಯತ್ನ ನಡೆದಿದಿದ್ದು, ತುಮಕೂರಿನ ತ್ರಿವಿಧ ದಾಸೋಹಿ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ನೆನಪಿಸಿಕೊಳ್ಳಲಾಗಿದ್ದು. ಅವರ ಭಾವಚಿತ್ರವನ್ನು ಸುಂದರವಾದ ತೆಂಗಿನ ಗರಿಗಳ ಕಲಾಕೃತಿಯೊಳಗೆ ಇರಿಸಿ ಪ್ರದರ್ಶಿಸಲಾಗಿದೆ.


    Provided by
    Provided by

    ಅದೇ ರೀತಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರುಗಳ ಸಮಾಜಸೇವೆಯನ್ನು ಬಿದಿರಿನ ಸುಂದರವಾದ ಕಲಾಕೃತಿಯಲ್ಲಿ ಇರಿಸಲಾಗಿದ್ದು ಅವರನ್ನು ನೆನಪಿಸುವ ಪ್ರಯತ್ನ ಮಾಡಲಾಗಿದೆ.

    ಒಟ್ಟಾರೆ ಫಲಪುಷ್ಪ ಪ್ರದಶನದಲ್ಲಿ ಜೈನ ಧಮದ ಶ್ರೀ ಶಾಂತಿಸಾಗರ ಮುನಿಗಳ ಗುರುಪರಂಪರೆಯನ್ನು ಮತ್ತು ದಿವ್ಯಾಕಾಶ ಸಮವಸರಣವನ್ನು ನೆನಪಿಸುವ ಜಿಲ್ಲಾಢಳಿತದ ಪ್ರಯತ್ನ ಶ್ಲಾಘನೆಗೆ ಪಾತ್ರವಾಗಿದೆ.

    ತುಮಕೂರಿನ ಹೊರವಲಯದಲ್ಲಿರುವ ಮಂದಾರಗಿರಿಯ ಪಿಂಚಿ ಮಂದಿರ ಮತ್ತು ದಿವ್ಯಾಕಾಶ ಸಮವರಣದ ಬೃಹತ್ ಪ್ರತಿಕೃತಿಗಳು ಜನರಲ್ಲಿ ಭಕ್ತಿಭಾವವನ್ನು ಇಮ್ಮಡಿಗೊಳಿಸುತ್ತಿವೆ. ಈ ಮೂಲ್ಕ ತುಮಕೂರು ಜಿಲ್ಲಾಡಳಿತವು ಜಿಲ್ಲೆಯಲ್ಲಿನ ಜೈನ ಧಮದ ಕುರುಹುಗಳನ್ನು ಪರಿಚಯಿಸಿದೆ. ಅಲ್ಲದೆ ಫಲಪುಷ್ಪ ಪ್ರದರ್ಶನದಲ್ಲಿ ಮುಖ್ಯ ಆಕರ್ಷಣೆಯಾಗಿವೆ.

    ತುಮಕೂರು ಜಿಲ್ಲೆಯ ಮಂದರಗಿರಿ ಬೆಟ್ಟವು ಪ್ರಮುಖ ಜೈನ ಯಾತ್ರ ಕೇಂದ್ರವಾಗಿದ್ದು, ಜೈನ ಧರ್ಮವು ಕರ್ನಾಟಕದಲ್ಲಿ ಶ್ರೀಮಂತ ಇತಿಹಾಸವನ್ನು ಹೊಂದಿದೆ. 81 ಅಡಿ ಎತ್ತರದ ಸುಂದರವಾದ  ಪಿಂಚಿ ಮಂದಿರದ ಗುಮ್ಮಟದ ಸ್ವರೂಪದಲ್ಲಿಯೇ ಪ್ರತಿಕೃತಿ ನಿಮಿಸಲಾಗಿದೆ.   ಮೇಲ್ಬಾಗ ಕೊಕ್ಕೆ ಆಕಾರವನ್ನು ಹೊಂದಿದ್ದು,ಮಂದರಗಿರಿ ಗುರು ಮಂದಿರವು ಇಂಡಿಗೋ ನೀಲಿ, ಹಸಿರು, ಬಿಳಿ ಮತ್ತು ಕಿತ್ತಳೆ ಬಣ್ಣಗಳ ರೋಮಾಂಚಕ ನವಿಲು ಗರಿಗಳ ವರ್ಣಚಿತ್ರಗಳಿಂದ ಅಲಂಕರಿಸಲ್ಪಟ್ಟಿದೆ. ಇದೇ ಮಾದರಿಯಲ್ಲಿ ಅಪರೂಪದ ಪುಷ್ಪಗಳನ್ನು ಬಳಸಿ ನಿಮಿಸಲಾಗಿದೆ.

    ಮಂದರಗಿರಿ ಗುರು ಮಂದಿರವು ಮೇ-2014 ರಲ್ಲಿ ಸ್ಥಾಪಿಸಲಾಗಿದೆ. 20 ನೇ ಶತಮಾನದ ದಿಗಂಬರ ಜೈನ ಆಚಾರ್ಯ ಶ್ರೀ ಶಾಂತಿ ಸಾಗರ ಮಹಾರಾಜ್ ರವರಿಗೆ ಸಮರ್ಪಿಸಲಾಗಿದೆ. ಜೈನ ಧರ್ಮದಲ್ಲಿ ನವಿಲು ಗರಿಗಳನ್ನು ಜೈನ ಸಂತರು ಅಹಿಂಸೆಯ ಸಂಕೇತವಾಗಿ ಬಳಸುತ್ತಾರೆ ಎಂಬುದನ್ನು ಫಲಪುಷ್ಪ ಪ್ರದಶನದಲ್ಲಿ ತೋಟಗಾರಿಕಾ ಇಲಾಖೆ ಪ್ರಚುರಪಡಿಸುತ್ತಿದೆ.

    ಫಲಪುಷ್ಪ ಪ್ರದರ್ಶನದ ಮುಖ್ಯ ಆಕರ್ಷಣೆಯಾಗಿ ಮಂದರಗಿರಿಯ ಪಿಂಚಿಗುರು ಮಂದಿರ ಒಂದೆಡೆಯಾದ್ರೆ ಮತ್ತೊಂದಡೆ ಮಂದರಗಿರಿಯ ಬೆಟ್ಟದಲ್ಲಿ ಇರುವ ಶ್ರೀ ಮಹಾವೀರ ತೀಥಂಕರರ ದಿವ್ಯಾಕಾಶ ಸಮವರಸರಣದ ಪ್ರತಿಕೃತಿಯನ್ನು ಪ್ರದಶಿಸಲಾಗಿದೆ.

    ಮಹಾವೀರ ತೀಥಂಕರರ ಸಮವರಣದ ಮಹತ್ವವನ್ನು ಕೂಡ ಇಲ್ಲಿ ಪರಿಚಯಿಸಲಾಗಿದೆ. ಸಮವರಣದ ಮಹತ್ವ ಮತ್ತು ಜಿನಧಮ ಪರಂಪರೆಯನ್ನು ಜನರಿಗೆ ಪರಿಚಯಿಸಲಾಗುತ್ತಿದೆ. ಈ ಮೂಲಕ ಫಲಪುಷ್ಪ ಪ್ರದಶನದಲ್ಲಿ ತುಮಕೂರು ಜಿಲ್ಲೆಯಲ್ಲಿ ಜೈನ ಧರ್ಮದ ಶ್ರೀಮಂತ ಪರಂಪರೆ ಅನಾವರಣಗೊಂಡಿದೆ ಎಂದೇ ಹೇಳಬಹುದಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.