nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
    • ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    • ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
    • ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಲ–ಕಾಲಕ್ಕೆ ಚುನಾವಣೆ ನಡೆದರೆ ಅನುದಾನ ಬಿಡುಗಡೆ: 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣಸ್ವಾಮಿ
    ತುಮಕೂರು January 30, 2025

    ಕಾಲ–ಕಾಲಕ್ಕೆ ಚುನಾವಣೆ ನಡೆದರೆ ಅನುದಾನ ಬಿಡುಗಡೆ: 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣಸ್ವಾಮಿ

    By adminJanuary 30, 2025No Comments2 Mins Read
    narayana swamy

    ತುಮಕೂರು:  ಸ್ಥಳೀಯ ಸಂಸ್ಥೆಗಳಿಗೆ ಕಾಲ–ಕಾಲಕ್ಕೆ ಚುನಾವಣೆಗಳು ನಡೆದಾಗ ಮಾತ್ರ ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡಲಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ.ಸಿ.ನಾರಾಯಣಸ್ವಾಮಿ ತಿಳಿಸಿದರು.

    ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ 5ನೇ ರಾಜ್ಯ ಹಣಕಾಸು ಆಯೋಗದ ವಿಷಯಗಳ ಕುರಿತು ಜಿಲ್ಲಾ ಪಂಚಾಯತಿಯಲ್ಲಿ ಬುಧವಾರ ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೇಂದ್ರ ಹಣಕಾಸು ಆಯೋಗವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಹಂಚಿಕೆ ಮಾಡುವ ಸಂದರ್ಭದಲ್ಲಿ ರಾಜ್ಯ ಹಣಕಾಸು ಆಯೋಗದ ಶಿಫಾರಸ್ಸುಗಳನ್ನು ಗಮನದಲ್ಲಿಟ್ಟುಕೊಂಡು ಹಂಚಿಕೆ ಮಾಡಲಿದೆ ಎಂದು ತಿಳಿಸಿದರು.


    Provided by
    Provided by

    ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ ನಿರ್ಮಾಣ, ವಿದ್ಯುತ್ ಸೇರಿದಂತೆ ಜನಸಾಮಾನ್ಯರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸ್ಥಳೀಯ ಸಂಸ್ಥೆಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

    “ತೆರಿಗೆ ಮೊದಲು–ಸೇವೆ ನಂತರ” ಎಂಬ ಧ್ಯೇಯವಾಕ್ಯದಡಿ ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸಿ ಸರ್ಕಾರದ ಸೇವೆಗಳನ್ನು ಪಡೆಯಬೇಕೆಂಬ ಸಂದೇಶವನ್ನು ಜನರಿಗೆ ಮುಟ್ಟಿಸಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ವಸೂಲಾತಿ ಮಾಡುವ ಮೂಲಕ ಸ್ಥಳೀಯವಾಗಿ ಆರ್ಥಿಕ ಸಂಪನ್ಮೂಲವನ್ನು ಹೆಚ್ಚಿಸಿಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಸಂಗ್ರಹವಾದ ಆರ್ಥಿಕ ಸಂಪನ್ಮೂಲವನ್ನು ಕ್ರೂಢೀಕರಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ವಿನಿಯೋಗಿಸಬೇಕು. ತೆರಿಗೆ ನಿರ್ಧರಣೆ, ವಸೂಲಾತಿ, ವಿನಾಯಿತಿ ಹಾಗೂ ತೆರಿಗೆ ನಿಯಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

    ತುರುವೇಕೆರೆ ಪಟ್ಟಣ ಪಂಚಾಯತಿ ಅಧ್ಯಕ್ಷೆ ಸ್ವಪ್ನ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಿಬ್ಬಂದಿಗಳ ಕೊರತೆಯಿದ್ದು, ಜನಸಂಖ್ಯೆಗನುಗುಣವಾಗಿ ಸಿಬ್ಬಂದಿಗಳನ್ನು ನೇಮಕ ಮಾಡಲು ಕ್ರಮಕೈಗೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಬಿಡುಗಡೆ ಮಾಡುವ ಅನುದಾನ ಸಾಕಾಗುವುದಿಲ್ಲ. ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಆಯೋಗಕ್ಕೆ ಮನವಿ ಮಾಡಿದರು.

    ಗುಬ್ಬಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಂಗಳಮ್ಮ ರಾಜಣ್ಣ ಮಾತನಾಡಿ, ಗುಬ್ಬಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿ ನಾಯಿಗಳನ್ನು ನಿಯಂತ್ರಿಸಲು ಸ್ಥಳೀಯ ಸಂಸ್ಥೆಗೆ ಕಷ್ಟಸಾಧ್ಯವಾಗಿದೆ. ಗುಬ್ಬಿ ಪಟ್ಟಣ ಪಂಚಾಯತಿಯಲ್ಲಿ ಪೌರ ಕಾರ್ಮಿಕರ ಸಂಖ್ಯೆಯೂ ಕಡಿಮೆಯಿದ್ದು, ಪಟ್ಟಣದ ಸ್ವಚ್ಛತೆ ಕಾಪಾಡಲು ಸಮಸ್ಯೆ ಉಂಟಾಗಿದೆ. ಇಂಜಿನಿಯರುಗಳಿಗೆ ಎರಡೆರಡು ನಗರ ಸ್ಥಳೀಯ ಸಂಸ್ಥೆಗಳ ಕರ್ತವ್ಯ ನಿಭಾಯಿಸಲು ನಿಯೋಜಿಸಿರುವುದರಿಂದ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ವಿಳಂಬವಾಗುತ್ತಿದ್ದು, ಶೀಘ್ರವೇ ಖಾಲಿ ಹುದ್ದೆಗಳ ನೇಮಕಕ್ಕೆ ಕ್ರಮಕೈಗೊಳ್ಳಬೇಕೆಂದು ಆಯೋಗಕ್ಕೆ ಮನವಿ ಮಾಡಿದರು.

    ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಮಂಜೂರಾದ ಹುದ್ದೆ, ಭರ್ತಿಯಾದ ಹುದ್ದೆ, ಖಾಲಿ ಇರುವ ಹುದ್ದೆ, ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವಿವರ; ಸಂಸ್ಥೆಗಳ ಆಯವ್ಯಯ ಹಾಗೂ ವೆಚ್ಚಗಳ ವಿವರ, ವಾಸ್ತವಿಕವಾಗಿ ಬಿಡುಗಡೆಯಾದ ಅನುದಾನ, ಕೇಂದ್ರ ಮತ್ತು ರಾಜ್ಯ ಹಣಕಾಸು ಆಯೋಗದ ಅನುದಾನ ಹಂಚಿಕೆ ಹಾಗೂ ವೆಚ್ಚ, ತೆರಿಗೆ ವಸೂಲಾತಿ, ಆದಾಯ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳು, ಇ-ಸ್ವತ್ತು ಅನುಷ್ಟಾನದಲ್ಲಿರುವ ಸಮಸ್ಯೆ ಹಾಗೂ ಪರಿಹಾರ, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ನೀಡುತ್ತಿರುವ ಸೇವೆಗಳ ವಿವರದ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು.

    ನಂತರ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ: ಸಿ. ನಾರಾಯಣಸ್ವಾಮಿ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಂದ ಪಡೆದ ಸಲಹೆಗಳನ್ನು ಅಂತಿಮ ವರದಿಯಲ್ಲಿ ದಾಖಲಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಗ್ರಾಮ ಪಂಚಾಯತಿಗಳ ಆದಾಯ ಹೆಚ್ಚಿಸಲು ತೆರಿಗೆ ವಸೂಲಾತಿ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ. ಆನ್‌ಲೈನ್ ಸೇವೆಗಳಿಂದ ತೆರಿಗೆ ವಸೂಲಾತಿ ಪಾರದರ್ಶಕವಾಗಿ ನಡೆಯುತ್ತಿದೆ. ತೆರಿಗೆ ವಸೂಲಾತಿಯನ್ನು ಪಂಚ ತಂತ್ರ 2.0 ತಂತ್ರಾಂಶದಲ್ಲಿ ಅನುಷ್ಟಾನಗೊಳಿಸುತ್ತಿರುವುದರಿಂದ ತೆರಿಗೆ ಲೆಕ್ಕಾಚಾರ ಸರಳಗೊಂಡಿದೆ ಎಂದು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಆಯೋಗದ ಸದಸ್ಯರಾದ ಮೊಹಮದ್ ಸನಾವುಲ್ಲಾ, ಆರ್.ಎಸ್. ಪೋಂಡೆ, ಕಾರ್ಯದರ್ಶಿ ಉಜ್ವಲ್ ಕುಮಾರ್ ಘೋಷ್, ಸಮಾಲೋಚಕರಾದ ಎಂ.ಕೆ. ಕೆಂಪೇಗೌಡ ಹಾಗೂ ಜಿ. ಸುಪ್ರಸನ್ನ, ಅಧ್ಯಕ್ಷರ ಆಪ್ತಕಾರ್ಯದರ್ಶಿ ಯಾಲಕ್ಕಿಗೌಡ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!

    June 8, 2026

    ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್

    June 8, 2026

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    June 8, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ಕೊರಟಗೆರೆ: ತಾಲ್ಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಟೆಗಾನಹಳ್ಳಿ ಗ್ರಾಮದ ಕೆರೆ ಸಂಪೂರ್ಣ ಹಾಳಾಗಿದ್ದ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ…

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.