nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಕ್ಕೆ ಕ್ರಮ: ಸಚಿವ ಮಧುಬಂಗಾರಪ್ಪ
    ತುಮಕೂರು February 2, 2025

    ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಕ್ಕೆ ಕ್ರಮ: ಸಚಿವ ಮಧುಬಂಗಾರಪ್ಪ

    By adminFebruary 2, 2025No Comments3 Mins Read
    madhu bangarappa

    ತುಮಕೂರು:  ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ 15,000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎನ್. ಮಧು ಬಂಗಾರಪ್ಪ ತಿಳಿಸಿದರು.

    ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕೊರತೆ ನೀಗಿಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಹಂತ–ಹಂತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಸರ್ಕಾರಿ ಶಾಲೆಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಿಸಲು ಹಲವಾರು ವಿನೂತನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಶಾಲೆಗಳಲ್ಲಿದ್ದ ನ್ಯೂನ್ಯತೆಗಳನ್ನು ಸರಿಪಡಿಸಲಾಗಿದೆ. ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನ ಲ್ಯಾಬ್ ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

    ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತದೆ. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ, ಪುಸ್ತಕ, ಶೂ, ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆಯಲ್ಲದೆ ಈಗಿರುವ ಶಾಲೆಗಳನ್ನು ಕೆಪಿಎನ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಇದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಆಸಕ್ತಿ ತೋರುತ್ತಿದ್ದಾರೆ ಎಂದರು.

    ಪ್ರಸಕ್ತ ವರ್ಷದಲ್ಲಿ ಪದವಿಪೂರ್ವ ಕಾಲೇಜುಗಳನ್ನೂ ಸಹ ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಪದವಿಪೂರ್ವ ಕಾಲೇಜುಗಳಿಗೂ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುವುದೆಂದರು.

    ಜಿಲ್ಲೆಯಲ್ಲಿ ಶತಮಾನ ಕಂಡ ಶಾಲೆಗಳನ್ನೂ ಸಹ ಅಭಿವೃದ್ಧಿಪಡಿಸಲಾಗುವುದು. ವಿಶೇಷ ಅನುದಾನದಡಿ ಶತಮಾನ ಕಂಡ ಶಾಲೆಗಳು ಮುಂದಿನ ಪೀಳಿಗೆಗೆ ಮಾದರಿಯಾಗುವಂತೆ ಉಳಿಸಿಕೊಂಡು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

    “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದಡಿ ತಾವು ಓದಿದ ಶಾಲೆಗಳ ಅಭಿವೃದ್ಧಿಗೆ ಹಲವಾರು ದಾನಿಗಳು ಆರ್ಥಿಕ ನೆರವು ನೀಡಲು ಮುಂದೆ ಬರುತ್ತಿದ್ದಾರೆ. ಶಾಲಾ ಪೀಠೋಪಕರಣ, ಲೇಖನ ಸಾಮಗ್ರಿ, ಸ್ಮಾರ್ಟ್ ತರಗತಿ ನಿರ್ಮಾಣಕ್ಕೆ ಸಹಾಯಹಸ್ತ ನೀಡುತ್ತಿದ್ದಾರೆ. ಅಲ್ಲದೆ ಈ ಕಾರ್ಯಕ್ರಮಕ್ಕೆ ಸಿಎಸ್ಆರ್ ನಿಧಿಯಿಂದ 1591 ಕೋಟಿ ರೂ.ಗಳನ್ನು ಸದ್ವಿನಿಯೋಗಿಸಲಾಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳೂ ಸಹ ತಾವು ಓದಿದ ಶಾಲೆಗಳ ಅಭಿವೃದ್ಧಿಗಾಗಿ ಕೊಡುಗೆಯನ್ನು ನೀಡಲು ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.

    ಜಿಲ್ಲೆಯು ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಹಿಂದುಳಿದಿದ್ದು, ಫಲಿತಾಂಶದ ಶೇಕಡಾ ಪ್ರಮಾಣವನ್ನು ಉನ್ನತ ಮಟ್ಟಕ್ಕೆ ಏರಿಸಲು ಶಿಕ್ಷಕರು, ಅಧಿಕಾರಿಗಳು ಶ್ರಮಿಸಬೇಕೆಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಶಾಲೆ ಹಾಗೂ ಶಿಕ್ಷಕರ ಕಾರ್ಯಕ್ಷಮತೆ ಹೆಚ್ಚಿಸುವ, ಅನುಭವಾತ್ಮಕ ಕಲಿಕೆಗಾಗಿ ರೂಪಿಸಿರುವ ವಿನೂತನ ಕಾರ್ಯಕ್ರಮಗಳ ಮೂಲಕ ಜಿಲ್ಲೆಯು ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ. ಈ ಕಾರ್ಯಕ್ರಮಗಳನ್ನು ಇತರೆ ಜಿಲ್ಲೆಗಳಿಗೆ ವಿನೂತನ ಕಾರ್ಯಕ್ರಮಗಳನ್ನು ವಿಸ್ತರಿಸಲಾಗುವುದೆಂದರು.

    ರಾಜ್ಯದಲ್ಲಿ ಇಂಗ್ಲೀಷ್ ಮಾಧ್ಯಮದ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ದ್ವಿಭಾಷಾ ಶಾಲೆಗಳನ್ನು ತೆರೆಯಲಾಗುವುದು. ಈಗಿರುವ ಕನ್ನಡ ಮಾಧ್ಯಮದ ಶಾಲೆಗಳು ದ್ವಿಭಾಷಾ ಶಾಲೆಗಳನ್ನಾಗಿ ಮಾರ್ಪಡಿಸಲಾಗುವುದು ಎಂದು ಹೇಳಿದರು.

    ಇದಕ್ಕೂ ಮುನ್ನ ನಡೆದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಪ್ರಗತಿ ಮಾಹಿತಿಯನ್ನು ಸಚಿವರಿಗೆ ತಿಳಿಸುತ್ತಾ, ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ವಸತಿ ಶಾಲೆ ಸೇರಿದಂತೆ ಒಟ್ಟು 3873 ಶಾಲೆಗಳಿದ್ದು, 2,10,183 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿಸಿದರಲ್ಲದೆ, ಜಿಲ್ಲೆಗೆ ಮಂಜೂರಾದ ಶಿಕ್ಷಕರ, ಕಾರ್ಯನಿರ್ವಹಿಸುತ್ತಿರುವ ಹಾಗೂ ಖಾಲಿ ಹುದ್ದೆಗಳ ಅಂಕಿ-ಅAಶಗಳ ಮಾಹಿತಿ ನೀಡಿದರು.

    ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 435 ಶಾಲೆಗಳಿಗೆ ಆವರಣಗೋಡೆ, 550 ಶೌಚಾಲಯ, 247 ಶಾಲಾ ಆಟದ ಮೈದಾನಗಳನ್ನು ನಿರ್ಮಿಸಲಾಗಿದ್ದು, 1347 ನಿರ್ಮಾಣ ಕಾಮಗಾರಿಗಳು ಪ್ರಗತಿಯಲ್ಲಿವೆ. ಜಿಲ್ಲೆಯಲ್ಲಿ 2024–25ನೇ ಸಾಲಿನಲ್ಲಿ 479 ಹೊಸ ಶಾಲಾ ಕೊಠಡಿಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಸರ್ಕಾರದಿಂದ 71 ಕೋಟಿ ರೂ.ಗಳ ಅನುದಾನವನ್ನು ನಿರೀಕ್ಷಿಸಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು.

    ನರೇಗಾ ಯೋಜನೆಯಡಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗಾಗಿ ಗುಲಾಬಿ ಬಣ್ಣದ ಹಾಗೂ ವಿದ್ಯಾರ್ಥಿಗಳಿಗಾಗಿ ನೀಲಿ ಬಣ್ಣದ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಿ 24*7 ನೀರು ಪೂರೈಕೆ ಇರುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

    ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಶಾಲಾ ಕೊಠಡಿ ಮೇಲ್ಛಾವಣಿ, ಗೋಡೆ ರಿಪೇರಿ, ನೆಲಹಾಸು, ಸುಣ್ಣ-ಬಣ್ಣ ಸೇರಿ 967 ಕೊಠಡಿಗಳ ದುರಸ್ತಿಗಾಗಿ 19.34 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗಾಗಲೇ ಶಿಥಿಲಾವಸ್ಥೆಯಲ್ಲಿರುವ 556 ಶಾಲಾ ಕೊಠಡಿಗಳನ್ನು ನೆಲಸಮಗೊಳಿಸಿ 1,086 ಕೊಠಡಿಗಳನ್ನು ನೆಲಸಮಗೊಳಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

    ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿದ ಸಚಿವರು, ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ನಕಲನ್ನು ತಡೆಗಟ್ಟಿ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ವೆಬ್ಕಾಸ್ಟಿಂಗ್ ಪದ್ಧತಿಯನ್ನು ಅನುಷ್ಠಾನಕ್ಕೆ ತರಲಾಗಿದೆ. ಪ್ರಾಥಮಿಕ ಹಂತದಲ್ಲಿಯೇ ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸಿದರೆ ಅವರ ಮುಂದಿನ ಭವಿಷ್ಯ ಉತ್ತಮವಾಗಲಿದೆ ಎಂಬ ಉದ್ದೇಶದಿಂದ ಈ ಪದ್ಧತಿಯನ್ನು ಅಳವಡಿಸಿಕೊಳ್ಳಲಾಗಿದೆ. ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿಕೊಳ್ಳಲು ಶಾಲೆಗಳು ಪರೀಕ್ಷಾ ನಕಲಿಗೆ ಅವಕಾಶ ಮಾಡಿಕೊಡಬಾರದು. ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ವೆಬ್ಕಾಸ್ಟಿಂಗ್ ಪದ್ಧತಿಯಿಂದ ಮಕ್ಕಳಲ್ಲಿಯೂ ಕಲಿಕಾ ಸಾಮರ್ಥ್ಯ ಹೆಚ್ಚಾಗಿದೆಯಲ್ಲದೆ, ಪೋಷಕರಿಗೂ ಸರ್ಕಾರಿ ಶಾಲೆಗಳ ಮೇಲೆ ವಿಶ್ವಾಸ ಮೂಡಿದೆ ಎಂದು ತಿಳಿಸಿದರು.

    ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಲು ಅಧಿಕಾರಿಗಳು ಶಾಲೆಗಳಿಗೆ ಖುದ್ದು ಭೇಟಿ ನೀಡಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಬಗ್ಗೆ ಪರಿಶೀಲಿಸಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಶಿಕ್ಷಕರ ಗುರುತರ ಜವಾಬ್ದಾರಿಯಾಗಿದೆ. ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೋಷಕರು ಹಾಗೂ ಶಿಕ್ಷಕರು ಯಾವುದೇ ರೀತಿಯಲ್ಲಿ ಮಾನಸಿಕವಾಗಿ ಕುಗ್ಗಿಸುವಂತಿಲ್ಲ. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಶಿಕ್ಷಕರು ಹೆಚ್ಚಿನ ಗಮನ ನೀಡಬೇಕು ಎಂದು ತಿಳಿಸಿದರಲ್ಲದೆ, ಶಿಕ್ಷಕರು ತಮ್ಮ ಹುದ್ದೆಯೊಂದಿಗೆ ಇತರೆ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಬಾರದು. ಪಡೆಯುವ ವೇತನಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಬೇಕು ಎಂದು ತಿಳಿಸಿದರು.

    ಅಧಿಕಾರಿಗಳು ವಿದ್ಯಾರ್ಥಿಗಳಿಗನುಗುಣವಾಗಿ ಪುಸ್ತಕ, ಸಮವಸ್ತ್ರ, ಶೂಗಳ ಬೇಡಿಕೆ ಸಲ್ಲಿಸಬೇಕು. ಹೆಚ್ಚುವರಿ ಬೇಡಿಕೆ ಸಲ್ಲಿಸಿ ವ್ಯರ್ಥವಾಗದಂತೆ ನಿಗಾವಹಿಸಬೇಕು ಎಂದು ಸಲಹೆ ನೀಡಿದರು.

    ಸಭೆಯಲ್ಲಿ ಶಾಸಕ ಸುರೇಶ್ ಗೌಡ, ಡಿಡಿಪಿಐಗಳಾದ ಮನಮೋಹನ ಹಾಗೂ ಗಿರಿಜಾ, ಡಯಟ್ ಪ್ರಾಂಶುಪಾಲ ಮಂಜುನಾಥ, ಡಿಡಿಪಿಯು ಬಾಲಗುರುಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.