ಕಲಬುರಗಿ: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಎಂದು ನಿನ್ನೆ ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ, ನಾನು ರಾಜಿನಾಮೆ ನೀಡಿದ್ದು ವಿಶೇಷ ಬೆಳವಣಿಗೆಯಲ್ಲ. ಯಾವುತ್ತೋ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದರು.
ನಾನು ಸಿಎಂ ಸಿದ್ದರಾಮಯ್ಯಗೆ 2ನೇ ಬಾರಿಗೆ ಪತ್ರ ಬರೆದಿದ್ದೇನೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೇವರೆಗೂ ನಿಮ್ಮ ಸ್ನೇಹಿತನಾಗಿ ಉಳಿಯುತ್ತೇನೆ ಅಂದಿದ್ದಾರೆ ಎಂದು ಬಿ.ಆರ್.ಪಾಟೀಲ್ ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ. ಹಾಗೆಂದು ನನಗೆ ಯಾವುದೇ ಅಸಮಾಧಾನ ಇಲ್ಲ. ಪತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎಲ್ಲವನ್ನೂ ನಾನು ತಿಳಿಸಿದ್ದೇನೆ. ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಿಲ್ಲ ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4