ಔರಾದ್: ತಾಲೂಕಿನಲ್ಲಿ ರಸ್ತೆ ಅಪಘಾತ ತಡೆಯುವ ನಿಟ್ಟಿನಲ್ಲಿ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ದ್ವಿಚಕ್ರ ವಾಹನ ಸವಾರರಿಗೆ ಪೊಲೀಸರು ಜಾಗೃತಿ ಮೂಡಿಸಿದರು.
ಔರಾದ್ ತಾಲ್ಲೂಕಿನ ಸಂತಪೂರ ಪೊಲೀಸ್ ಠಾಣೆಯ ಪಿ.ಎಸ್.ಐ ನಂದಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಯು, ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರನ್ನು ತಡೆದು, ದಂಡ ವಿಧಿಸುವ ಬದಲು ಹೆಲ್ಮೆಟ್ ವಿತರಿಸುವ ಮೂಲಕ ಹೆಲ್ಮೆಟ್ ನ ಮಹತ್ವವನ್ನು ತಿಳಿಸಿಕೊಡಲಾಯಿತು.
ಜಿಲ್ಲೆಯಲ್ಲಿ ಅಪಘಾತ ತಡೆಯುವ ನಿಟ್ಟಿನಲ್ಲಿ, ಜನಸಾಮಾನ್ಯರ ಪ್ರಾಣ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪೊಲೀಸರು ಈ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4