ತುಮಕೂರು: ನಗರದ ಯಲ್ಲಾಪುರ ಕುಶಾಲ್ ಬಾರ್ & ರೆಸ್ಟೋರೆಂಟ್ ನಲ್ಲಿ ಕುಡಿತದ ಮತ್ತಿನಲ್ಲಿ ಇಬ್ಬರ ನಡುವೆ ಭಾರೀ ಗಲಾಟೆ ಸಂಭವಿಸಿ ಮಾರಾಮಾರಿ ನಡೆದಿದೆ.
ಅಂತರಸನಹಳ್ಳಿಯ ರೌಡಿಶೀಟರ್ ಭರತ್ ಹಾಗೂ ಧನುಷ್ ಮಧ್ಯೆ ಮಾತಿನ ಚಕಮಕಿ ಆರಂಭವಾಗಿದ್ದು ಹಲ್ಲೆಗೆ ಕಾರಣವಾಗಿದೆ. ಇಬ್ಬರು ಒಟ್ಟಿಗೆ ಕುಡಿದು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಭರತ್ ತನ್ನ ಕೈಯಲ್ಲಿದ್ದ ಮದ್ಯದ ಬಾಟಲಿನಿಂದ ಧನುಷ್ ಗೆ ಹೊಡೆದಿದ್ದು, ಇದರಿಂದ ಧನುಷ್ ಕುತ್ತಿಗೆ ಭಾಗದಲ್ಲಿ ಗಂಭೀರ ಗಾಯವಾಗಿದೆ.
ಗಾಯಗೊಂಡ ಧನುಷ್ ಕೂಡ ತಿರುಗಿ ಹಲ್ಲೆ ನಡೆಸಿದ್ದಾನೆ. ಭರತ್ ತಲೆಯ ಮೇಲೆ ಹಾಲೋ ಬ್ರಿಕ್ಸ್ ಎತ್ತಿ ಹಾಕಿದ್ದಾನೆ. ಇದರಿಂದ ಭರತ್ ತೀವ್ರವಾಗಿ ಗಾಯಗೊಂಡಿದ್ದಾನೆ. ಇಬ್ಬರೂ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಇಬ್ಬರು ನಟೋರಿಯಸ್ ರೌಡಿಶೀಟರ್ ರೋಹಿತ್ ಗ್ಯಾಂಗ್ ನ ಸದಸ್ಯರಾಗಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಗಾಯಾಳುಗಳ ವಿಚಾರಣೆ ಹಾಗೂ ಈ ಜಗಳದ ಹಿಂದಿನ ಕಾರಣ ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4