ಬೆಂಗಳೂರು: ಕುಂಭಮೇಳಕ್ಕೆ ಹೋದ್ರೆ ತಪ್ಪೇನಿದೆ? ಕುಂಭ ಮೇಳ ಎನ್ನುವುದು ಪುಣ್ಯ ಸ್ಥಾನ. ಹಲವರಿಗೆ ಅದರ ಮೇಲೆ ನಂಬಿಕೆ ಇದೆ, ನಂಬಿಕೆ ಇದ್ದವರು ಹೋಗುತ್ತಾರೆ. ಅವರವರ ನಂಬಿಕೆ ಅವರವರಿಗೆ. ನಂಬಿಕೆಯನ್ನು ಪ್ರಶ್ನೆ ಮಾಡಲು ನಾನು ಯಾರು? ಎಂದು ನಟ ಪ್ರಕಾಶ್ ರಾಜ್ ಪ್ರಶ್ನೆ ಮಾಡಿದ್ದಾರೆ.
ಇತ್ತೀಚೆಗೆ ಕುಂಭಮೇಳದಲ್ಲಿ ಪ್ರಕಾಶ್ ರಾಜ್ ಸ್ನಾನ ಮಾಡುತ್ತಿರುವಂತೆ ಎಐ ಚಿತ್ರ ಸೃಷ್ಟಿಸಿದ್ದ ಕಿಡಿಗೇಡಿಗಳ ವಿರುದ್ಧ ಪ್ರಕಾಶ್ ರಾಜ್ ದೂರು ನೀಡಿದ್ದರು. ಇದೀಗ ಕುಂಭ ಮೇಳದ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಮತ್ತೆ ಪ್ರಕಾಶ್ ರಾಜ್ ಉತ್ತರಿಸಿದ್ದಾರೆ.
ನನಗೆ ವೈಯಕ್ತಿಕವಾಗಿ ದೇವರ ಮೇಲೆ ನಂಬಿಕೆ ಇಲ್ಲ. ನಾನು ದೇವರು ಇಲ್ಲದೇ ಬದುಕುತ್ತೇನೆ ಆದರೆ ಮನುಷ್ಯರು ಇಲ್ಲದೇ ಬದುಕುವುದಿಲ್ಲ. ಸಮಸ್ಯೆಗಳು ಬಂದಲ್ಲಿ ನಮಗೆ ಮನುಷ್ಯರು ಬೇಕು ಎಂದು ನಾನು ನಂಬುತ್ತೇನೆ. ಹಾಗೆಂದ ಮಾತ್ರಕ್ಕೆ ಬೇರೆಯವರ ನಂಬಿಕೆಗಳನ್ನು ಪ್ರಶ್ನೆ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಒಬ್ಬರ ಮನಸ್ಸಿಗೆ ಶಾಂತಿ, ಚೈತನ್ಯ ಕೊಡುತ್ತದೆ ಎಂತಾದರೆ ಅವರು ಕುಂಭಮೇಳಕ್ಕೆ ಹೋದರೆ ತಪ್ಪೇನೂ ಇಲ್ಲ. ಆದರೆ ಈ ವಿಷಯಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವುದು, ಸುಳ್ಳು ಸುದ್ದಿ ಹರಿಬಿಡುವುದನ್ನು ಒಪ್ಪುವುದಿಲ್ಲ ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4