ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರನ್ನು ವಿಶೇಷ ತನಿಖಾ ತಂಡ(ಎಸ್ ಐಟಿ) ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಪಿಎಸ್ ಐ ನೇಮಕಾತಿ ಹಗರಣದಲ್ಲಿ ಮಾಗಡಿ ಮೂಲದವರು ಹಾಗೂ ಸಂಬಂಧಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿದ್ದಾರೆ. ಇದನ್ನು ಅಶ್ವಥ್ ನಾರಾಯಣ ಮಾಡಿಸಿದ್ದಾರೆ ಎನ್ನುವ ಆರೋಪಗಳ ಹಿನ್ನೆಲೆ ಅವರನ್ನು ವಿಚಾರಣೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಸರ್ಕಾರ ಪಿಎಸ್‌ಐ ಹಗರಣದ ಮರುತನಿಖೆಗೆ ಆದೇಶಿಸಿತ್ತು. ಈ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ ಐಟಿ ಅಶ್ವಥ್ ನಾರಾಯಣ ಅವರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದೆ.
ವಿಚಾರಣೆಗೆ ಹಾಜರಾದ ಅಶ್ವಥ್ ನಾರಾಯಣ ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ, ಇದೊಂದು ರಾಜಕೀಯ ಪ್ರೇರಿತ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4