ತುಮಕೂರು: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಯುವಕ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ತುಮಕೂರು ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ 4 ರಲ್ಲಿ ನಡೆದಿದೆ.
ಬೆಂಗಳೂರಿನಿಂದ ತುಮಕೂರಿಗೆ ಬರುತ್ತಿದ್ದ ಯುವಕ ಛಾಯಾಂಕ್ (24) ಮೃತಪಟ್ಟ ಯುವಕನಾಗಿದ್ದಾನೆ.
ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಅಮ್ಮಸಂದ್ರ ಗ್ರಾಮದ ಯುವಕ ಪುಷ್ಪಕ್ ಎಕ್ಸ್’ಪ್ರೆಸ್ ರೈಲಿನಲ್ಲಿ ಆಗಮಿಸಿದ್ದು, ರೈಲಿನಿಂದ ಆಯತಪ್ಪಿ ತಾನು ಬಂದ ರೈಲಿನಡಿಗೆ ಸಿಲುಕಿದ್ದಾರೆ.
ಘಟನೆಯಿಂದಾಗಿ ಯುವಕನ ಕೈ ಕಾಲುಗಳಿಗೆ ತೀವ್ರವಾದ ಏಟು ಬಿದ್ದಿತ್ತು. ನರಳಾಡುತ್ತಿದ್ದ ಯುವಕನನ್ನು ಕಂಡು ಮನೆಯವರ ಪೋನ್ ನಂಬರ್ ಪಡೆದು ಮಾಹಿತಿ ನೀಡಲಾಗಿತ್ತು. ಆದರೆ ಆಸ್ಪತ್ರೆಗೆ ರವಾನಿಸುವಷ್ಟರಲ್ಲಿ ಯುವಕ ಸಾವನ್ನಪ್ಪಿದ್ದ. ತಕ್ಷಣವೇ ಆಸ್ಪತ್ರೆಗೆ ಸಾಗಿಸಿದ್ದರೆ, ಯುವಕನನ್ನು ರಕ್ಷಿಸಲು ಸಾಧ್ಯವಾಗುತ್ತಿತ್ತು ಎನ್ನುವ ಅಭಿಪ್ರಾಯವೂ ಕೇಳಿ ಬಂದಿದೆ.
ಮೃತ ಛಾಯಾಂಕ್ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಕೆಲಸ ಮಾಡ್ತಿದ್ದ ಎಂದು ತಿಳಿದು ಬಂದಿದೆ. ತುಮಕೂರು ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4