ಕೊರಟಗೆರೆ: ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊರಟಗೆರೆ ತಾಲೂಕಿನ ಜಿ. ನಾಗೇನಹಳ್ಳಿ ಸಮೀಪದ ಖಾಸಗಿ ಸೌತೆಕಾಯಿ ಫ್ಯಾಕ್ಟರಿ ಬಳಿ ಹೆದ್ದಾರಿಯಲ್ಲಿ ನಡೆದಿದೆ.
ಆಂಧ್ರಪ್ರದೇಶದ ಬಾಳೆಕಟ್ಟೆ ಗುಡಿಬಂಡೆ ಮೂಲದ ವಾಸಿ ಮಂಜುನಾಥ್ (22) ಮೃತಪಟ್ಟ ಯುವಕನಾಗಿದ್ದಾನೆ. ಅಪಘಾತ ನಡೆಯುತ್ತಿದ್ದಂತೆ ಕಾರು ಚಾಲಕ ಕಾರಿನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಸಬ್ ಇನ್ಸ್ಪೆಕ್ಟರ್ ಚೇತನ್ ಕುಮಾರ್ ಹಾಗೂ ತಂಡ ಭೇಟಿ ನೀಡಿ ಪರಿಶೀಲಿಸಿದ್ದು, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx