ತುಮಕೂರು: ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ಗಾಗಿ ನಿಗದಿಪಡಿಸಲಾಗಿರುವ ನಿಯಮಗಳನ್ನು ಸಡಿಲಗೊಳಿಸುವಂತೆ ಪ್ರಿಂಟ್ ಮೀಡಿಯಾ ಮತ್ತು ಸೋಶಿಯಲ್ ಮೀಡಿಯಾ ಪತ್ರಕರ್ತರ ಸಂಘವು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರಿಗೆ ಮನವಿ ಮಾಡಿತು.
ಮಾಧ್ಯಮ ಪಟ್ಟಿಯಲ್ಲಿ ಸೇರಿರದ ಸ್ಥಳೀಯ ಪತ್ರಿಕೆಗಳ ಪತ್ರಕರ್ತರೆಲ್ಲರಿಗೂ ಬಸ್ ಪಾಸ್ ದೊರಕಬೇಕು. ಗ್ರಾಮೀಣ ಪತ್ರಕರ್ತರಿಗೆ ಯಾವುದೇ ವೇತನಗಳು ಇರುವುದಿಲ್ಲವಾದ್ದರಿಂದ ವೇತನಕ್ಕೆ ಸಂಬಂಧಿಸಿದ ಯಾವುದೇ ವಿವರಗಳನ್ನು ನೀಡಲು ಸಾಧ್ಯವಿಲ್ಲ. ಹಾಗಾಗಿ ವೇತನಪತ್ರ ದಾಖಲೆಗಳ ಬದಲಾಗಿ ಕೇವಲ ಅಕೌಂಟ್ ನಂಬರ್/ಪಾಸ್ ಪುಸ್ತಕ ನಕಲು ಪಡೆಯಲು ನಿಯಮ ಸಡಿಲಿಕೆ ಮಾಡಬೇಕು ಎಂದು ಮನವಿ ಮಾಡಲಾಯಿತು.
ಸೇವಾನುಭವದ ವರ್ಷಗಳನ್ನು 4 ವರ್ಷಗಳ ಬದಲಿಗೆ 2 ವರ್ಷ ನಿಗದಿಪಡಿಸುವ ಮೂಲಕ ಎಲ್ಲಾ ಗ್ರಾಮೀಣ ಪತ್ರಕರ್ತರಿಗೂ ಬಸ್ ಪಾಸ್ ದೊರಕುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಸಂದರ್ಭದಲ್ಲಿ ಪ್ರಿಂಟ್ ಮೀಡಿಯಾ ಮತ್ತು ಸೋಶಿಯಲ್ ಮೀಡಿಯಾ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಡಿ.ಕೃಷ್ಣಮೂರ್ತಿ, ಉಪಾಧ್ಯಕ್ಷರಾದ ನಾದೂರು ವಾಸದೇವ,ಕಾರ್ಯದರ್ಶಿ ಸ್ವಾಮಿ ಲಿಂಗಪ್ಪ, ಖಜಾಂಚಿ ಚಂದ್ರಶೇಖರ್, ತುಮಕೂರು ಜಿಲ್ಲಾ ಉಪಾಧ್ಯಕ್ಷ ಕುಮಾರಸ್ವಾಮಿ ಜಿ.ಕೆ., ನಿರ್ದೇಶಕರಾದ ಜಗದೀಶ್ ಬಿ., ಗೋವಿಂದಪ್ಪ, ಸಿದ್ಧರಾಜು, ಮಾಲತೇಶ್, ಸತೀಶ್ ,ಅನಿಲ್ ಇದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4