nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ : ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ
    ರಾಜ್ಯ ಸುದ್ದಿ February 5, 2025

    ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ : ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ

    By adminFebruary 5, 2025No Comments4 Mins Read
    c.m siddaramaya

    ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.

    ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ ಕೈ ಸಾಲ ಪಡೆಯುವ ಪದ್ಧತಿ ರೂಢಿಯಲ್ಲಿದೆ.ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಸಾಮಾಜಿಕ,ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಕಾರ್ಯಗಳಿಗಾಗಿ ಹಣ ಖರ್ಚು ಮಾಡುವುದರಿಂದ, ಮರುಪಾವತಿ ಕ್ಷಮತೆ ಕಡಿಮೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಸಾಲ ನೀಡಿದವರು ಮರು ವಸೂಲಿಗಾಗಿ ಒತ್ತಾಯಿಸುತ್ತಾರೆ.ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.


    Provided by
    Provided by

    ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ:

    ಕಳೆದ ಜನವರಿ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕರ್ನಾಟಕ ವಲಯದ ಅಧ್ಯಕ್ಷರು, ಭಾರತೀಯ ರಿಸರ್ವ ಬ್ಯಾಂಕ್ (RBI) ನ ಪ್ರಾಂತೀಯ ನಿರ್ದೇಶಕರು, ಹಾಗೂ ಸಾ-ಧನ್(SA-DHAN),ಎಕೆಎಂಐ,ಎಂಎಫ್ಐಎನ್ ಮತ್ತು ಪ್ರಮುಖ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು , ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ ಸಂಚಾಲಕರು, ಅಧಿಕಾರಿಗಳು , ಪೊಲೀಸ್, ಕಂದಾಯ, ಸಹಕಾರ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಭೆ ನಡೆಸಿ. ಕಿರುಕುಳವನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೆಶನ ನೀಡಿದ್ದಾರೆ.

    ಕರ್ನಾಟಕದ ಅಧಿನಿಯಮಗಳು:

    ಕರ್ನಾಟಕ ಲೇವಾದೇವಿದಾರರ ಅಧಿನಿಯಮ-1961 ಅಡಿಯಲ್ಲಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.
    ಈ ಅಧಿನಿಯಮದಡಿಯಲ್ಲಿ 2024ರ ಡಿಸೆಂಬರ್ 31 ರವರೆಗೆ 20,425 ಸಂಸ್ಥೆಗಳು ನೋಂದಣಿಯಾಗಿವೆ. ಅದರಲ್ಲಿ 6590 ಲೇವಾದೇವಿದಾರರು, 6772 ಪಾನ್ ಬ್ರೋಕರ್ಗಳು, 7063 ಹಣಕಾಸಿನ ಸಂಸ್ಥೆಗಳು (Finance Corporation) ಇವೆ.

    ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯಿದೆ- 2004 ಪ್ರಕಾರ ಭದ್ರತಾ ಸಾಲಗಳಿಗೆ ವರ್ಷಕ್ಕೆ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವರ್ಷಕ್ಕೆ ಗರಿಷ್ಠ ಶೇ.16 ಗರಿಷ್ಠ ಬಡ್ಡಿ ದರವನ್ನು ಲೇವಾದೇವಿದಾರರಿಗೆ ನಿಗದಿಪಡಿಸಲಾಗಿದೆ.

    ಇಂತಹ ಮಾಹಿತಿಗಳನ್ನು ಸಾರ್ವಜನಿಕವಾಗಿ ಫಲಕಗಳ ಮೂಲಕ ಪ್ರದರ್ಶಿದಲು ಸಂಸ್ಥೆಗಳು ಹಾಗೂ ಸಂಬಂಧಿಸಿದ ಕಚೇರಿಗಳಿಗೆ ತಿಳಿಸಲಾಗಿದೆ. ಸಾಲಗಾರರು ಇವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಸಾಲ ಪಡೆಯುವ ಮುನ್ನ ಲೇವಾದೇವಿ ಸಂಸ್ಥೆಗಳ ಅಧಿಕೃತ ನೋಂದಣಿ ಪತ್ರ, ಬಡ್ಡಿದರ, ವಸೂಲಿ ಪ್ರಕ್ರಿಯೆ ಇತ್ಯಾದಿಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ ಪ್ರಕ್ರಿಯೆಗಳಿಂದ ಸಾಲ ಮರುಪಾವತಿ ಸಂದರ್ಭದಲ್ಲಿನ ಕಿರುಕುಳ ತಪ್ಪಿಸಲು ಸಾಧ್ಯವಾಗುತ್ತದೆ.

    ಸೂಕ್ಷ್ಮ ಹಣಕಾಸು (Micro finance) ಸಂಸ್ಥೆಗಳು ಎಂದರೇನು?:

    3 ಲಕ್ಷ ರೂ.ವರೆಗೂ ಆದಾಯವಿರುವ ಸಾರ್ವಜನಿಕರಿಗೆ ಸಾಲವನ್ನು ಒದಗಿಸುವ ವ್ಯವಸ್ಥೆಯನ್ನು ಮೈಕ್ರೋ ಫೈನಾನ್ಸ್ ಎಂದು ಘೋಷಿಸಲಾಗಿದೆ. ಬ್ಯಾಂಕುಗಳಲ್ಲದ ಸಹಕಾರ ಸಂಘಗಳು, ಎನ್ಬಿಎಫ್ಸಿಗಳು, ಸರ್ಕಾರೇತರ ಸಂಸ್ಥೆಗಳು, ಟ್ರಸ್ಟ್ಗಳು, ಸಣ್ಣ ಅಂಗಡಿ ಮಾಲೀಕರು, ಇನ್ನಿತರರು ಸಾಲ ನೀಡುತ್ತಾರೆ.

    ಸಹಕಾರಿ ಸಂಸ್ಥೆಗಳ ಮೇಲ್ವಿಚಾರಣೆಯನ್ನು ಸಹಕಾರ ಇಲಾಖೆ. ಬ್ಯಾಂಕ್ ಅಲ್ಲದ ಆರ್ಥಿಕ ಸಂಸ್ಥೆಗಳ (ಎನ್ಬಿಎಫ್ಸಿ) ಮೇಲ್ವಿಚಾರಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮೂಲಕ ನೋಂದಣಿ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಾ-ಧನ್ (SA-Dhan) ಮತ್ತು ಮೈಕ್ರೋ ಫೈನಾನ್ಸ್ ಇಂಡಸ್ಟ್ರಿ ನೆಟ್ವರ್ಕ್ (MFIN) ಸಂಸ್ಥೆಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸ್ವಯಂ ನಿಯಂತ್ರಣಾ ಸಂಸ್ಥೆಗಳನ್ನಾಗಿ (self-regulatory organisation) ನೇಮಿಸಿದೆ.ನಿಗದಿತ ಉತ್ತಮ ಲೇವಾದೇವಿ ಪದ್ದತಿಗಳನ್ನು ಅನುಷ್ಠಾನಗೊಳಿಸಲು ಈ ಸಂಸ್ಥೆಗಳನ್ನು ರಚಿಸಲಾಗಿದೆ.

    ಕರ್ನಾಟಕ ರಾಜ್ಯದಲ್ಲಿ ಕೇವಲ 31 ಮೈಕ್ರೋ ಫೈನಾನ್ಸ್ ಇಂಡಸ್ಟ್ರಿಗಳು ಅಸ್ತಿತ್ವದಲ್ಲಿ ಇವೆ. ಈ 31 ಸಂಸ್ಥೆಗಳು ಅಸೋಸಿಯೇಷನ್ ಆಫ್ ಕರ್ನಾಟಕ ಮೈಕ್ರೋ ಫೈನಾನ್ಸ್ ಇನಸ್ಟಿಟ್ಯೂಷನ್ (AKMI) ಸದಸ್ಯತ್ವ ಪಡೆದಿವೆ. ರಾಜ್ಯದಲ್ಲಿ ಈ ಸಂಸ್ಥೆಗಳ 3090 ಶಾಖೆಗಳಿದ್ದು 37,967 ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. 1,09,88,332 ಖಾತೆಗಳಲ್ಲಿ 59,367.76 ಕೋಟಿ ರೂ. ಬಾಕಿ ಉಳಿದಿದೆ.

    ನಿಯಮಗಳನ್ನು ಪಾಲಿಸದ ಹಣಕಾಸು ಸಂಸ್ಥೆಗಳ ಬಗ್ಗೆ ಮೇಲ್ವಿಚಾರಣಾ ಸಂಸ್ಥೆಗಳ ಮೂಲಕ ಭಾರತೀಯ ರಿಸರ್ವ್ ಬ್ಯಾಂಕಿಗೆ ವರದಿ ನೀಡಲಾಗುತ್ತದೆ , ಆರ್ಬಿಐ ಒಪ್ಪಿಗೆಯೊಂದಿಗೆ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗುತ್ತದೆ.

    ದಬ್ಬಾಳಿಕೆಯ ಸಾಲ ಮರುಪಾವತಿ ಕ್ರಮದಿಂದ ಸಂರಕ್ಷಿಸಲು ಅಧಿಕೃತವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಗಳು ಎಲ್ಲಾ ಎನ್ ಬಿಎಫ್ ಸಿ–ಎಂಎಫ್ ಐಗಳು ಬಡ್ಡಿಯ ದರ, ಮರುಪಾವತಿಯ ಕಂತು ಮತ್ತು ಅಸಲು ಸಾಲ ಮುಂತಾದವುಗಳ ಬಗ್ಗೆ ʼಫ್ಯಾಕ್ಟ್ ಶೀಟ್ನಲ್ಲಿ ಸಾಲ ವಿತರಣೆಯ ಸಮಯದಲ್ಲಿ ಪ್ರತಿಯೊಬ್ಬ ಸಾಲಗಾರನಿಗೆ ಮಾಹಿತಿ ಒದಗಿಸಬೇಕು.

    ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು:

    ಮೈಕ್ರೋ ಫೈನಾನ್ಸ್ ಇನ್ಸ್ಟಿಟ್ಯೂಷನ್ (ಎಂಎಫ್ಐ) , ಮನಿ ಲೆಂಡಿಂಗ್ ಏಜೆನ್ಸಿ ಅಥವಾ ಸಂಸ್ಥೆಯಿಂದ ನೀಡುವ ಎಲ್ಲಾ ಸಾಲಗಳ ಮಂಜೂರಾತಿ, ವಿತರಣೆಯ ಪ್ರಕ್ರಿಯೆಯಲ್ಲಿ ಈ ಅಂಶಗಳನ್ನು ಅನುಸರಿಸಬೇಕು:

    * ಸಾಲಗಾರನಿಗೆ ಸಾಲದ ನಿಯಮಗಳ ಬಗ್ಗೆ ಸ್ಥಳೀಯ ಭಾಷೆಯಲ್ಲಿ ಅಥವಾ ಆತನಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಬೇಕು

    * ಸಾಲದ ಅರ್ಜಿಯಲ್ಲಿ ಷರತ್ತುಗಳ ಬಗ್ಗೆ ಮಾಹಿತಿ ನೀಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಬೇಕು.

    * ಯಾವ ದಾಖಲೆಗಳನ್ನು ನೀಡುವ ಅವಶ್ಯಕತೆ ಇದೆ ಎನ್ನುವ ಸೂಕ್ತ ಮಾಹಿತಿ ನೀಡಬೇಕು.

    * ನಗದು ಪುಸ್ತಕ, ಲೆಡ್ಜರ್ ಮತ್ತು ಇತರ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು.

    *ಸಾಲ ನೀಡಿದ ದಿನಾಂಕದಿಂದ ಏಳು ದಿನಗಳ ಒಳಗೆ ಸಾಲಗಾರನಿಗೆ ನಿಗದಿತ ನಮೂನೆಯಲ್ಲಿ ಸಾಲದ ಮೊತ್ತ ,ನೀಡಿದ ದಿನಾಂಕ ಮತ್ತು ಅವಧಿಯ ಮುಕ್ತಾಯ, ಸಂಸ್ಥೆಯ ಕಾರ್ಯನಿರ್ವಾಹಕರ ಹೆಸರು ಮತ್ತು ವಿಳಾಸ, ನಿಯಮಾನುಸಾರ ವಿಧಿಸಲಾಗುವ ಬಡ್ಡಿದರ ಸ್ಪಷ್ಟವಾಗಿರುವ ಲಿಖಿತ ದಾಖಲೆಯನ್ನು ತಲುಪಿಸಬೇಕು.

    * ಸಾಲಗಾರನು ಮಾಡುವ ಪಾವತಿಗೆ ಪ್ರತಿಯಾಗಿ ಸಹಿ ಮಾಡಿದ ರಶೀದಿ ನೀಡಬೇಕು.

    * ಸಾಲಗಾರನ ಲಿಖಿತ ಬೇಡಿಕೆಯ ಮೇರೆಗೆ ಸಾಲಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯ ನಕಲನ್ನು ನೀಡಬೇಕು.

    * ಸಾಲಗಾರರಿಂದ ಪಡೆದ ಭದ್ರತೆಯನ್ನು ಸ್ಪಷ್ಟವಾಗಿ ತಿಳಿಸಬೇಕು

    *ಜನಸಾಮಾನ್ಯರು ಈ ವಿಧಾನಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು. ತಮ್ಮ ಅಧಿಕೃತ ಹಕ್ಕುಗಳು,ಬಾಧ್ಯತೆಗಳ ಬಗ್ಗೆ ಖಚಿತ ಪಡಿಸಿಕೊಂಡ ನಂತರ ಸಾಲ ತೆಗೆದುಕೊಳ್ಳಬೇಕು.

    ಸ್ವಸಹಾಯ ಗುಂಪುಗಳಲ್ಲಿ ಸಾಲ:

    ಮಹಿಳಾ ಸ್ವ–ಸಹಾಯ ಗುಂಪುಗಳಿಂದ ಹಲವು ಕಡೆ ಬಳಕೆ ಸಾಲವನ್ನು (Consumption Loan) ಪಡೆಯುವ ವ್ಯವಸ್ಥೆ ಇದೆ. ಇವುಗಳಲ್ಲಿ ಶೇ. 99 ರಷ್ಟು ಯಶಸ್ವಿಯಾಗಿ ಮರುಪಾವತಿ ಕೂಡ ಆಗುತ್ತವೆ. ಬ್ಯಾಂಕುಗಳಲ್ಲಿ ಇರುವಂತೆ ದಾಖಲಾತಿ ಒದಗಿಸುವ, ಜಾಮೀನು ನೀಡುವ ಹಾಗೂ ತಮ್ಮ ಆಸ್ತಿಗಳ ಅಡಮಾನ ಮಾಡುವ ಕ್ಲಿಷ್ಟ ವಿಧಾನ ಇಲ್ಲಿರುವುದಿಲ್ಲ. ಸರಳ ವಿಧಾನ ಅನುಸರಿಸಿ ಸಾಲ ಸಿಗುವುದರಿಂದ ಜನರು ಇಂತಹ ವ್ಯವಸ್ಥೆಗಳಿಗೆ ಹೆಚ್ಚಾಗಿ ಮೊರೆ ಹೋಗುತ್ತಾರೆ.

    ಸಹಾಯವಾಣಿ:

    ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು,ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ. ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಿಗೆ ದೂರು ನೀಡಬಹುದು.

    ಸೂಕ್ಷ್ಮ ಹಣಕಾಸು ಸಂಸ್ಥೆ (MFI) ,ಮನಿ ಲೆಂಡಿಂಗ್ ಸಂಸ್ಥೆಗಳ ನಿಯಮ ಉಲ್ಲಂಘನೆಗಳ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಹಾಯವಾಣಿ ಸಂಖ್ಯೆ 14448 ಗೆ ಮಾಹಿತಿ ನೀಡಬಹುದು.

    ರಾಜ್ಯ ಸರ್ಕಾರವು ಮೈಕ್ರೋ ಫೈನಾನ್ಸ್ ಸಾಲಗಾರರಿಗೆ ಎಲ್ಲ ರೀತಿಯ ಕಾನೂನು ರಕ್ಷಣೆ ನೀಡಲು ಕ್ರಮವಹಿಸಿದೆ ನೊಂದ ವ್ಯಕ್ತಿಗಳು ರಾಜ್ಯದ ಏಕೀಕೃತ ಸಹಾಯವಾಣಿ ಸಂಖ್ಯೆ: 112 ಅಥವಾ 1902 ಸಂಪರ್ಕಿಸಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ…

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.