ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹೊಸಪಟ್ಟಣ ಗ್ರಾಮದ ನಿವಾಸಿ ನಿರ್ಗತಿಕರಾದ ನಂಜಮ್ಮರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಾತ್ಸಲ್ಯ ಮನೆ ಕಟ್ಟಿಕೊಡುವ ಸಲುವಾಗಿ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಗುದ್ದಲಿಪೂಜೆಯಲ್ಲಿ ಹೊನ್ನವಳ್ಳಿ ಗ್ರಾಮ ಪಂಚಾಯತಿ ಅದ್ಯಕ್ಷರಾದ ದೊಡ್ಡಯ್ಯ, ಗಾರೆ ಮೇಸ್ತ್ರಿ ಶಂಕರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪಟೂರು ತಾಲ್ಲೂಕಿನ ಯೋಜನಾಧಿಕಾರಿ ಉದಯ್ ಕೆ, ವಲಯ ಮೇಲ್ವಿಚಾರಕ ಪರಶಿವಮೂರ್ತಿ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx