ಬೆಂಗಳೂರು: ಪತ್ನಿ ತವರು ಮನೆಗೆ ಹೋದ ಖುಷಿಯಲ್ಲಿ ಆಟೋ ಚಾಲಕನೊಬ್ಬ ತನ್ನ ಆಟೋದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರಿಗೆ ಬಿಸ್ಕತ್ ವಿತರಿಸಿದ್ದಾನೆ.
ನನ್ನ ಹೆಂಡತಿ ತವರು ಮನೆಗೆ ಹೋಗಿದ್ದಾಳೆ ಹಾಗಾಗಿ ನಾನು ತುಂಬಾ ಸಂತೋಷವಾಗಿದ್ದೇನೆ ಎಂದು ಬರೆದು ಪ್ರಯಾಣಿಕರಿಗೆ ಉಚಿತ ಬಿಸ್ಕತ್ ವಿತರಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ವಿಡಿಯೋವನ್ನು ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನನ್ನ ಹೆಂಡತಿ ತವರು ಮನೆಗೆ ಹೋಗಿದ್ದಾಳೆ, ನಾನು ಸಂತೋಷವಾಗಿದ್ದೇನೆ ಎಂದು ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಚಾಲಕ ಬರೆದುಕೊಂಡಿದ್ದಾನೆ.
ಈ ವಿಡಿಯೋಗೆ ಸಾಕಷ್ಟು ಜನರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಆಟೋ ಚಾಲಕನಿಗೆ ಶುಭಾಶಯಗಳನ್ನು ಕೋರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx