nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಜಿಲ್ಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ

    October 6, 2025

    ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ

    October 6, 2025

    ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್

    October 6, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಜಿಲ್ಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ
    • ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ
    • ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್
    • ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!
    • ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ
    • ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
    • ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ ಆಡಳಿತ ಬರಬೇಕು: ಯತ್ನಾಳ್
    • ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ: ಶಾಲಿನಿ ರಜನೀಶ್
    ತುಮಕೂರು February 6, 2025

    ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಿ: ಶಾಲಿನಿ ರಜನೀಶ್

    By adminFebruary 6, 2025No Comments4 Mins Read
    shalini rajanish

    ತುಮಕೂರು: ಮಧ್ಯಮ  ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ  ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್  ಕಂಪನಿಗಳಲ್ಲಿ ಸಾಲ ಪಡೆದು, ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು,  ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು  ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದ್ದಾರೆ.

    ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ ಕೈ ಸಾಲ ಪಡೆಯುವ ಪದ್ಧತಿ ರೂಢಿಯಲ್ಲಿದೆ. ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಸಾಮಾಜಿಕ, ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಕಾರ್ಯಗಳಿಗಾಗಿ ಹಣ ಖರ್ಚು ಮಾಡುವುದರಿಂದ, ಮರುಪಾವತಿ ಕ್ಷಮತೆ ಕಡಿಮೆ ಇರುತ್ತದೆ. ಇಂತಹ  ಸಂದರ್ಭಗಳಲ್ಲಿ ಸಾಲ ನೀಡಿದವರು ಮರು ವಸೂಲಿಗಾಗಿ ಒತ್ತಾಯಿಸುತ್ತಾರೆ. ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು  ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.


    Provided by
    Provided by
    Provided by

    ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ:

    ಕಳೆದ ಜನವರಿ 25ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕರ್ನಾಟಕ ವಲಯದ ಅಧ್ಯಕ್ಷರು, ಭಾರತೀಯ ರಿಸರ್ವ್ ಬ್ಯಾಂಕಿ (RBI)ನ ಪ್ರಾಂತೀಯ ನಿರ್ದೇಶಕರು ಹಾಗೂ ಸಾ–ಧನ್(SA–DHAN), ಎಕೆಎಂಐ, ಎಂಎಫ್‍ ಐಎನ್ ಮತ್ತು ಪ್ರಮುಖ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು, ರಾಜ್ಯ ಮಟ್ಟದ ಬ್ಯಾಂಕರುಗಳ ಸಮಿತಿ ಸಂಚಾಲಕರು, ಪೊಲೀಸ್, ಕಂದಾಯ, ಸಹಕಾರ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಿರುಕುಳವನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡಿದ್ದಾರೆ.

    ಲೇವಾದೇವಿದಾರರ ಅಧಿನಿಯಮಗಳನ್ನು ಕಟ್ಟುನಿಟ್ಟಿನ ಪಾಲನೆಗೆ ಸೂಚನೆ:

    ಕರ್ನಾಟಕ ಲೇವಾದೇವಿದಾರರ ಅಧಿನಿಯಮ–1961ರಡಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಈ ಅಧಿನಿಯಮದಡಿ 2024ರ ಡಿಸೆಂಬರ್ 31ರವರೆಗೆ  20,425 ಸಂಸ್ಥೆಗಳು ನೋಂದಣಿಯಾಗಿವೆ.  ಅದರಲ್ಲಿ 6590 ಲೇವಾದೇವಿದಾರರು, 6772 ಪಾನ್ ಬ್ರೋಕರ್‍ಗಳು, 7063 ಹಣಕಾಸಿನ ಸಂಸ್ಥೆ(Finance Corporation)ಗಳಿದ್ದು, ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯಿದೆ– 2004 ಪ್ರಕಾರ  ಭದ್ರತಾ ಸಾಲಗಳಿಗೆ ವರ್ಷಕ್ಕೆ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವರ್ಷಕ್ಕೆ ಗರಿಷ್ಠ ಶೇ.16ರಷ್ಟು  ಗರಿಷ್ಠ ಬಡ್ಡಿ ದರವನ್ನು ಲೇವಾದೇವಿದಾರರಿಗೆ  ನಿಗದಿಪಡಿಸಲಾಗಿದೆ.

    ಇಂತಹ ಮಾಹಿತಿಗಳನ್ನು ಸಾರ್ವಜನಿಕವಾಗಿ ಫಲಕಗಳ ಮೂಲಕ ಪ್ರದರ್ಶಿಸಲು ಸಂಸ್ಥೆಗಳು ಹಾಗೂ ಸಂಬಂಧಿಸಿದ ಕಚೇರಿಗಳಿಗೆ ನಿರ್ದೇಶಿಸಲಾಗಿದೆ. ಸಾಲಗಾರರು ಇವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಸಾಲ ಪಡೆಯುವ ಮುನ್ನ ಲೇವಾದೇವಿ ಸಂಸ್ಥೆಗಳ ಅಧಿಕೃತ ನೋಂದಣಿ ಪತ್ರ, ಬಡ್ಡಿದರ, ವಸೂಲಿ ಪ್ರಕ್ರಿಯೆ ಇತ್ಯಾದಿಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು.  ಈ ಪ್ರಕ್ರಿಯೆಗಳಿಂದ ಸಾಲ ಮರುಪಾವತಿ ಸಂದರ್ಭದಲ್ಲಿನ ಕಿರುಕುಳ ತಪ್ಪಿಸಲು ಸಾಧ್ಯವಾಗುತ್ತದೆ.

    3 ಲಕ್ಷ ರೂ. ಆದಾಯವಿರುವವರಿಗೆ ಮಾತ್ರ ಸಾಲ:

    3 ಲಕ್ಷ ರೂ.ಗಳವರೆಗೂ ಆದಾಯವಿರುವ ಸಾರ್ವಜನಿಕರಿಗೆ ಸಾಲವನ್ನು ಒದಗಿಸುವ ವ್ಯವಸ್ಥೆಯನ್ನು ಮೈಕ್ರೋ ಫೈನಾನ್ಸ್ ಎಂದು ಘೋಷಿಸಲಾಗಿದೆ.  ಬ್ಯಾಂಕುಗಳಲ್ಲದ  ಸಹಕಾರ ಸಂಘ, ಎನ್‍ ಬಿಎಫ್‍ಸಿ, ಸರ್ಕಾರೇತರ ಸಂಸ್ಥೆ, ಟ್ರಸ್ಟ್, ಸಣ್ಣ ಅಂಗಡಿ ಮಾಲೀಕರು, ಇನ್ನಿತರರು ಸಾಲ ನೀಡುತ್ತಾರೆ.

    ಸಹಕಾರಿ ಸಂಸ್ಥೆಗಳ ಮೇಲ್ವಿಚಾರಣೆಯನ್ನು ಸಹಕಾರ ಇಲಾಖೆ, ಬ್ಯಾಂಕ್ ಅಲ್ಲದ ಆರ್ಥಿಕ  ಸಂಸ್ಥೆಗಳ(ಎನ್‍ ಬಿಎಫ್‍ ಸಿ) ಮೇಲ್ವಿಚಾರಣೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‍ ಬಿಐ) ಮೂಲಕ ನೋಂದಣಿ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಾ-ಧನ್(SA–Dhan) ಮತ್ತು  ಮೈಕ್ರೋ ಫೈನಾನ್ಸ್ ಇಂಡಸ್ಟ್ರಿ ನೆಟ್‍ವರ್ಕ್ (MFIN) ಸಂಸ್ಥೆಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್(RBI) ಸ್ವಯಂ ನಿಯಂತ್ರಣಾ ಸಂಸ್ಥೆಗಳನ್ನಾಗಿ (self-regulatory organisation)  ನೇಮಿಸಿದೆ. ನಿಗಧಿತ  ಉತ್ತಮ ಲೇವಾದೇವಿ ಪದ್ದತಿಗಳನ್ನು ಅನುಷ್ಠಾನಗೊಳಿಸಲು ಈ ಸಂಸ್ಥೆಗಳನ್ನು ರಚಿಸಲಾಗಿದೆ.

    ಕರ್ನಾಟಕ ರಾಜ್ಯದಲ್ಲಿ ಕೇವಲ 31 ಮೈಕ್ರೋ ಫೈನಾನ್ಸ್ ಇಂಡಸ್ಟ್ರೀಸ್‍ ಗಳು ಅಸ್ತಿತ್ವದಲ್ಲಿದ್ದು, ಈ  ಸಂಸ್ಥೆಗಳು ಅಸೋಸಿಯೇಷನ್ ಆಫ್ ಕರ್ನಾಟಕ ಮೈಕ್ರೋ ಫೈನಾನ್ಸ್ ಇನಸ್ಟಿಟ್ಯೂಷನ್(AKMI) ಸದಸ್ಯತ್ವ ಪಡೆದಿವೆ.  ರಾಜ್ಯದಲ್ಲಿ ಈ ಸಂಸ್ಥೆಗಳ 3090 ಶಾಖೆಗಳಿದ್ದು 37,967 ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. 1,09,88,332 ಖಾತೆಗಳಲ್ಲಿ 59,367.76 ಕೋಟಿ ರೂ. ಬಾಕಿ ಉಳಿದಿದೆ.

    ನಿಯಮಗಳನ್ನು ಪಾಲಿಸದ ಹಣಕಾಸು ಸಂಸ್ಥೆಗಳ ಬಗ್ಗೆ  ಮೇಲ್ವಿಚಾರಣಾ ಸಂಸ್ಥೆಗಳ ಮೂಲಕ ಭಾರತೀಯ ರಿಸರ್ವ್ ಬ್ಯಾಂಕಿಗೆ ವರದಿ ನೀಡಲಾಗುತ್ತದೆ. ವರದಿಯನ್ನಾಧರಿಸಿ ಆರ್‍ ಬಿಐ ಒಪ್ಪಿಗೆಯೊಂದಿಗೆ ಅಂತಹ ಹಣಕಾಸು ಸಂಸ್ಥೆಗಳ ಮೇಲೆ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗುವುದು.

    ದಬ್ಬಾಳಿಕೆಯ ಸಾಲ ಮರುಪಾವತಿ ಕ್ರಮದಿಂದ ಸಂರಕ್ಷಿಸಲು ಅಧಿಕೃತವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಗಳು ಎಲ್ಲಾ ಎನ್‍ ಬಿಎಫ್‍ಸಿ-ಎಂಎಫ್‍ ಐಎನ್‍ ಗಳು ಬಡ್ಡಿಯ ದರ, ಮರುಪಾವತಿಯ ಕಂತು ಮತ್ತು ಅಸಲು ಸಾಲ ಮುಂತಾದವುಗಳ ಬಗ್ಗೆ ಫ್ಯಾಕ್ಟ್ ಶೀಟ್‍ ನಲ್ಲಿ ಸಾಲ ವಿತರಣೆಯ ಸಮಯದಲ್ಲಿ ಪ್ರತಿಯೊಬ್ಬ ಸಾಲಗಾರನಿಗೆ ಮಾಹಿತಿ ಒದಗಿಸಬೇಕು.

    ಮೈಕ್ರೋ ಫೈನಾನ್ಸ್  ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು:

    ಮೈಕ್ರೋ ಫೈನಾನ್ಸ್ ಇನ್‍ ಸ್ಟಿಟ್ಯೂಷನ್ (ಎಂಎಫ್‍ ಐ), ಮನಿ ಲೆಂಡಿಂಗ್ ಏಜೆನ್ಸಿ ಅಥವಾ ಸಂಸ್ಥೆಯಿಂದ ನೀಡುವ  ಎಲ್ಲಾ ಸಾಲಗಳ ಮಂಜೂರಾತಿ, ವಿತರಣೆಯ ಪ್ರಕ್ರಿಯೆಯಲ್ಲಿ ಈ  ಅಂಶಗಳನ್ನು  ಅನುಸರಿಸಬೇಕು.  ಸಾಲಗಾರನಿಗೆ ಸಾಲದ ನಿಯಮಗಳ ಬಗ್ಗೆ   ಸ್ಥಳೀಯ ಅಥವಾ ಆತನಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಬೇಕು. ಸಾಲದ ಅರ್ಜಿಯಲ್ಲಿ ಷರತ್ತುಗಳ ಬಗ್ಗೆ ಮಾಹಿತಿ ನೀಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಬೇಕು. ಯಾವ ದಾಖಲೆಗಳನ್ನು ನೀಡುವ ಅವಶ್ಯಕತೆ ಇದೆ ಎನ್ನುವ ಸೂಕ್ತ ಮಾಹಿತಿ ನೀಡಬೇಕು.  ನಗದು ಪುಸ್ತಕ, ಲೆಡ್ಜರ್ ಮತ್ತು  ಇತರ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು.

    ಸಾಲ ನೀಡಿದ ದಿನಾಂಕದಿಂದ ಏಳು ದಿನಗಳ ಒಳಗೆ ಸಾಲಗಾರನಿಗೆ ನಿಗದಿತ ನಮೂನೆಯಲ್ಲಿ ಸಾಲದ ಮೊತ್ತ, ನೀಡಿದ ದಿನಾಂಕ ಮತ್ತು ಅವಧಿಯ ಮುಕ್ತಾಯ,  ಸಂಸ್ಥೆಯ ಕಾರ್ಯನಿರ್ವಾಹಕರ ಹೆಸರು ಮತ್ತು ವಿಳಾಸ, ನಿಯಮಾನುಸಾರ ವಿಧಿಸಲಾಗುವ ಬಡ್ಡಿದರ ಸ್ಪಷ್ಟವಾಗಿರುವ ಲಿಖಿತ ದಾಖಲೆಗಳನ್ನು ತಲುಪಿಸಬೇಕು. ಸಾಲಗಾರನು ಮಾಡುವ ಪಾವತಿಗೆ ಪ್ರತಿಯಾಗಿ ಸಹಿ ಮಾಡಿದ ರಶೀದಿ ನೀಡಬೇಕು. ಸಾಲಗಾರನ ಲಿಖಿತ ಬೇಡಿಕೆಯ ಮೇರೆಗೆ  ಸಾಲಕ್ಕೆ ಸಂಬಂಧಿಸಿದ ದಾಖಲೆಯ ನಕಲನ್ನು ನೀಡಬೇಕು. ಸಾಲಗಾರರಿಂದ ಪಡೆದ ಭದ್ರತೆಯನ್ನು ಸ್ಪಷ್ಟವಾಗಿ  ತಿಳಿಸಬೇಕು. ಜನಸಾಮಾನ್ಯರು ಈ ವಿಧಾನಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು.  ತಮ್ಮ ಅಧಿಕೃತ ಹಕ್ಕು–ಬಾಧ್ಯತೆಗಳ ಬಗ್ಗೆ ಖಚಿತ ಪಡಿಸಿಕೊಂಡ ನಂತರ ಸಾಲ ತೆಗೆದುಕೊಳ್ಳಬೇಕು.

    ಸ್ವಸಹಾಯ ಗುಂಪುಗಳಲ್ಲಿ ಸಾಲ:

    ಮಹಿಳಾ ಸ್ವ–ಸಹಾಯ ಗುಂಪುಗಳಿಂದ  ಹಲವು ಕಡೆ ಬಳಕೆ ಸಾಲವನ್ನು (Consumption Loan) ಪಡೆಯುವ ವ್ಯವಸ್ಥೆ ಇದೆ. ಇವುಗಳಲ್ಲಿ ಶೇ.99ರಷ್ಟು ಯಶಸ್ವಿಯಾಗಿ ಮರುಪಾವತಿ ಕೂಡ ಆಗುತ್ತವೆ.  ಬ್ಯಾಂಕುಗಳಲ್ಲಿ ಇರುವಂತೆ ದಾಖಲಾತಿ ಒದಗಿಸುವ, ಜಾಮೀನು ನೀಡುವ ಹಾಗೂ ತಮ್ಮ ಆಸ್ತಿಗಳ ಅಡಮಾನ ಮಾಡುವ ಕ್ಲಿಷ್ಟ ವಿಧಾನ ಇಲ್ಲಿರುವುದಿಲ್ಲ. ಸರಳ ವಿಧಾನ ಅನುಸರಿಸಿ ಸಾಲ ಸಿಗುವುದರಿಂದ ಜನರು ಇಂತಹ ವ್ಯವಸ್ಥೆಗಳಿಗೆ ಹೆಚ್ಚಾಗಿ ಮೊರೆ ಹೋಗುತ್ತಾರೆ.

    ಸಹಾಯ ವಾಣಿ:

    ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು, ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ. ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು  ಸಹಾಯವಾಣಿ ಸಂಖ್ಯೆಗಳಿಗೆ  ದೂರು ನೀಡಬಹುದು. ಸೂಕ್ಷ್ಮ ಹಣಕಾಸು ಸಂಸ್ಥೆ (MFI), ಮನಿ ಲೆಂಡಿಂಗ್ ಸಂಸ್ಥೆಗಳ ನಿಯಮ ಉಲ್ಲಂಘನೆಗಳ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಹಾಯವಾಣಿ ಸಂಖ್ಯೆ 14448ಕ್ಕೆ ಮಾಹಿತಿ ನೀಡಬಹುದು.

    ರಾಜ್ಯ ಸರ್ಕಾರವು  ಮೈಕ್ರೋ ಫೈನಾನ್ಸ್ ಸಾಲಗಾರರಿಗೆ ಎಲ್ಲ ರೀತಿಯ ಕಾನೂನು ರಕ್ಷಣೆ ನೀಡಲು ಕ್ರಮವಹಿಸಿದೆ ನೊಂದ ವ್ಯಕ್ತಿಗಳು ರಾಜ್ಯದ ಏಕೀಕೃತ ಸಹಾಯವಾಣಿ ಸಂಖ್ಯೆ: 112 ಅಥವಾ 1902 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು ಜಿಲ್ಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ

    October 6, 2025

    ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ

    October 5, 2025

    ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    October 5, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಜಿಲ್ಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ

    October 6, 2025

    ಬೆಂಗಳೂರು: ತುಮಕೂರು ಜಿಲ್ಲೆಯಲ್ಲಿ ಚಿರತೆ ಕಾರ್ಯಪಡೆ ರಚನೆಗೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಅನುಮೋದನೆ ನೀಡಿದ್ದಾರೆ. ಕಾರ್ಯಪಡೆಯಲ್ಲಿ…

    ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ

    October 6, 2025

    ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್

    October 6, 2025

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.