ಬೆಂಗಳೂರು: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ ಎಂದು ಭಾರತೀಯರನ್ನು ಅಮೆರಿಕ ಸರ್ಕಾರ ಕೈ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಭಾರತಕ್ಕೆ ವಾಪಸ್ ಕಳಿಸಿರುವ ಘಟನೆಯನ್ನು ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮವಾಗಿ ಅವರ ದೇಶದಲ್ಲಿ ನೆಲೆಸಿದ್ದರೆ, ಅದಕ್ಕೆ ಯಾವ ಶಿಕ್ಷೆ ನೀಡಬೇಕೋ ನೀಡಲಿ. ಅದನ್ನು ಬಿಟ್ಟು, ಈ ರೀತಿ ಖೈದಿಗಳಿಗೆ ಹಾಕಿದಂತೆ ಸರಪಳಿ ಹಾಕಿರುವುದನ್ನು ಯಾರಿಂದಲೂ ಒಪ್ಪಲು ಸಾಧ್ಯವಿಲ್ಲ. ಇದು ಮಾನವ ಕುಲಕ್ಕೆ ಅಗೌರವ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಈ ಹಿಂದೆ ಕೂಲಿ ಕಾರ್ಮಿಕರಿಗೆ ಸರಪಳಿ ಹಾಕಿ ಕಟ್ಟುತ್ತಿದ್ದದ್ದನ್ನು ನಾವು ನೋಡಿದ್ದೇವೆ. ಅದನ್ನು ತಪ್ಪಿಸಲು ಸರ್ಕಾರ ಕಾನೂನು ತಂದು ಶಿಕ್ಷೆ ನೀಡಿದೆ. ಆದರೆ ಮುಂದುವರಿದ, ಜಾಗೃತಿ ಇರುವ ದೇಶಗಳಲ್ಲಿ ಈ ರೀತಿ ನಡೆದಿರುವುದು ಖಂಡನೀಯ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4