ತುಮಕೂರು: ತುಮಕೂರು ತಾಲ್ಲೂಕು ಕೋರಾ ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಪಾಠಶಾಲೆಗೆ ಹಾಗೂ ಕೋರಾ ಗ್ರಾಮ ಪಂಚಾಯ್ತಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಭೇಟಿ ನೀಡಿದರು.
ಕೋರಾ ಗ್ರಾಮ ಪಂಚಾಯ್ತಿಗೆ ದಿಢೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ, ಗ್ರಾಮ ಪಂಚಾಯ್ತಿಯು ಈವರೆಗೂ ಮಕ್ಕಳ ಹಕ್ಕುಗಳ ಗ್ರಾಮಸಭೆ ನಡೆಸದಿರುವುದು, ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ, ಶಿಕ್ಷಣ ಕಾರ್ಯಪಡೆ ರಚಿಸದಿರುವುದು, ಮಕ್ಕಳ ಅಂಕಿಅಂಶಗಳ ದಾಖಲೆ ನಿರ್ವಹಿಸದಿರುವುದನ್ನು ಗಮನಿಸಲಾಯಿತು.
ಒಟ್ಟಾರೆ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ನಿರ್ಲಕ್ಷವಹಿಸಿರುವ ಕೋರಾ ಗ್ರಾಮ ಪಂಚಾಯ್ತಿಯ ಸಂಬಂಧಿಸಿದ ಅಧಿಕಾರಿಗಳ ಮೇಲೆ ನಿಯಮಾನುಸಾರ ಸೂಕ್ತಕ್ರಮ ಕೈಗೊಂಡು ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ತಮಕೂರು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4