nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತರ ಜಮೀನಿಗೆ ತೆರಳದಂತೆ ಬಲಾಢ್ಯರಿಂದ ಅಡ್ಡಿ: ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
    ತುಮಕೂರು February 10, 2025

    ದಲಿತರ ಜಮೀನಿಗೆ ತೆರಳದಂತೆ ಬಲಾಢ್ಯರಿಂದ ಅಡ್ಡಿ: ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

    By adminFebruary 10, 2025No Comments2 Mins Read
    daliths protest

    ತುಮಕೂರು: ದಲಿತರು ತಮ್ಮ ಜಮೀನುಗಳಿಗೆ ಹಾದು ಹೋಗುತ್ತಿರುವ ರಸ್ತೆಗಳನ್ನ ಬಲಾಢ್ಯರು ಅಡ್ಡಿಪಡಿಸಿ ಒತ್ತುವರಿ ಮಾಡಿಕೊಳ್ಳುತ್ತಿದ್ದು, ಒತ್ತುವರಿ ತೆರವುಗೊಳಿಸುವಲ್ಲಿ ಕಂದಾಯ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿತು.

    ಕುಣಿಗಲ್ ತಾಲೂಕಿನ ತರೆದಕುಪ್ಪೆ, ಬೆಣಚಕಲ್ಲು, ಆರ್. ಬ್ಯಾಡರಹಳ್ಳಿ, ಇಪ್ಪಾಡಿ, ಗುನ್ನಾಗೆರೆ, ಕೊಡವತ್ತಿ, ಬ್ಯಾಡರಹಳ್ಳಿ, ತೊರೆಹಳ್ಳಿ, ಶೆಟ್ಟಿಗೆಹಳ್ಳಿ, ಚನ್ನಾಪುರ, ಮಲ್ಲಾಪುರ ಮತ್ತಿತರೆ ಗ್ರಾಮಗಳಲ್ಲಿ ದಲಿತರು ತಮ್ಮ ಪೂರ್ವಜರ ಕಾಲದಿಂದಲೂ ತಮ್ಮ ಜಮೀನುಗಳಿಗೆ ಹಾದು ಹೋಗುತ್ತಿದ್ದ ರಸ್ತೆಗಳನ್ನು ಏಕಾಏಕಿ ಅತಿಕ್ರಮ ಪ್ರವೇಶ ಮಾಡಿ ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಬಲಾಢ್ಯರು — ರಸ್ತೆ ಒತ್ತುವರಿ ಮಾಡಿಕೊಂಡಿರುವುದರಿಂದ ದಲಿತರು ತಮ್ಮ ಜಮೀನಿನಲ್ಲಿ ಉಳುಮೆಗೆ, ಬಿತ್ತನೆಗೆ ಮತ್ತು ಕಟಾವು ಕೆಲಸಗಳನ್ನು ಮಾಡಕು ತೊಂದರೆ  ಅನುಭವಿಸುತ್ತಿದ್ದು,  ತರೇದಕುಪ್ಪೆ ಮತ್ತು ಬೆಣಚಕಲ್ಲು ಗ್ರಾಮದಲ್ಲಿ ಬೆಳೆದ ಬೆಳೆಗಳು ದನಕರುಗಳ ಪಾಲಾಗಿ ಉಳಿದ ಬೆಳೆ ನಾಶವಾಗಿ ಹೋಗುತ್ತಿದೆ. ಕೆಲವು ಗ್ರಾಮಗಳಲ್ಲಿ ರಸ್ತೆ ಇಲ್ಲದೆ ಮಕ್ಕಳು ಶಾಲೆಗೆ ಹೋಗಲು ದಲಿತರು ತಮ್ಮ ಮನೆಗಳಿಗೆ ತಿರುಗಾಡಲು ತೊಂದರೆ ಉಂಟಾಗಿದೆ. ಅಧಿಕಾರಿಗಳಿಗೆ ಸಾಕಷ್ಟು ಬಾರಿ ದೂರು ನೀಡಿ, ಒತ್ತುವರಿ ತೆರವುಗೊಳಿಸಿ ಕೊಡಬೇಕೆಂದು ಮನವಿ ಮಾಡುತ್ತಾ ಬಂದಿದ್ದರೂ, ಯಾವುದೇ ಪ್ರಯೋಜನವಾಗಿರುವುದಿಲ್ಲ, ಜಿಲ್ಲಾ ಹಾಗೂ ಉಪವಿಭಾಗ ಮತ್ತು ತಾಲ್ಲೂಕು ಮಟ್ಟದ ಪ.ಜಾ/ಪ.ಪಂ. ಹಿತ ರಕ್ಷಣಾ ಸಮಿತಿ ಸಭೆಯಲ್ಲೂ ವಿಷಯ ಚರ್ಚೆಗೆ ಬಂದು ತಿಂಗಳ ಒಳಗಾಗಿ ಒತ್ತುವರಿ ತೆರವುಗೊಳಿಸುತ್ತೇವೆ ಎಂದು ಭರವಸೆ ನೀಡಿದ್ದ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

    ಅಧಿಕಾರಿಗಳು ಉದಾಸೀನತೆ ಮತ್ತು ಕರ್ತವ್ಯ ನಿರ್ಲಕ್ಷತೆ ತೋರಿದ್ದರಿಂದ ಮೊದಲೇ ಆರ್ಥಿಕವಾಗಿ ಹಿಂದುಳಿದಿರುವ ದಲಿತ ಕುಟುಂಬಗಳು ಇರುವ ಅಲ್ಪಸ್ವಲ್ಪ ಜಮೀನಿನಲ್ಲಿ ಬೆಳೆ ಬೆಳೆಯಲಾಗದೆ ಮತ್ತು ಬೆಳೆದ ಬೆಳೆ ಕಟಾವು ಮಾಡಲಾಗದೆ ತೊಂದರೆ ಅನುಭವಿಸುತ್ತಾ, ಸ್ವಾಭಿಮಾನದ ಬದುಕು ಕಳೆದುಕೊಂಡು ಮತ್ತಷ್ಟು ಆರ್ಥಿಕವಾಗಿ ಹಿಂದುಳಿಯಲು ಕಾರಣವಾಗುತ್ತಿದೆ ಎಂದು  ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.

    ಬಲಾಢ್ಯರ ಕಿರುಕುಳ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷತೆ ಮತ್ತು ಉದಾಸೀನತೆ ಯಿಂದ ದಲಿತರು ಎರಡು ವರ್ಷಗಳಿಂದ ತತ್ತರಿಸಿ ಹೋಗಿರುವುದಲ್ಲದೆ,  ನೆಮ್ಮದಿ ಇಲ್ಲದೆ ಬದುಕುವಂತಾಗಿದೆ. ಇಂತಹ ಪರಿಸ್ಥಿತಿಗೆ ಕಾರಣರಾದ ಅಧಿಕಾರಿಗಳ ಆಡಳಿತ ವ್ಯವಸ್ಥೆಗೆ ನಮ್ಮ ಧಿಕ್ಕಾರವಿರಲಿ, ಇಂತಹ ಪರಿಸ್ಥಿತಿ ನಿರ್ಮಾಣವಾಗಲು ಕಾರಣರಾದ ಬಲಾಢ್ಯ ಸಮಾಜದ ಕೆಲವು ವ್ಯಕ್ತಿಗಳ ಹಾಗೂ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಒತ್ತುವರಿಯಾಗಿರುವ ರಸ್ತೆಯನ್ನು ತೆರವುಗೊಳಿಸಿ ದಲಿತರಿಗೆ ನ್ಯಾಯ ಒದಗಿಸ ಬೇಕೆಂಬುದೇ ದಲಿತ ಸಂಘಟನೆಗಳ ಒಕ್ಕೂಟದ ಪ್ರತಿಭಟನಾ ಧರಣಿಯ ಉದ್ದೇಶವಾಗಿದೆ. ತೆರವುಗೊಳಿಸದೇ ಮತ್ತೆ ವಿಳಂಬ ಮಾಡಿದ್ದಲ್ಲಿ ತೀವ್ರ ತರಹದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

    ಹಕ್ಕೊತ್ತಾಯಗಳು :

    * ದಲಿತರು ಬಹುಕಾಲದಿಂದ ಹಾದು ಹೋಗುತ್ತಿದ್ದ ನಕಾಶೆ ಕಂಡ ಕಾಲುದಾರಿ, ಬಂಡಿ ದಾರಿ, ಅಥವಾ ರೂಢಿಗತ ರಸ್ತೆಗಳನ್ನು ಏಕಏಕಿ ಒತ್ತುವರಿ ಮಾಡಿಕೊಂಡು ದಲಿತರು ತಮ್ಮ ಜಮೀನುಗಳಿಗೆ ಹೋಗಲು ಅಡ್ಡಿಪಡಿಸಿ ದೌರ್ಜನ್ಯ ವ್ಯಸಗಿರುವ ಬಲಾಢ್ಯರ ವಿರುದ್ಧ ಪ.ಜಾ ಮತ್ತು ಪ.ಪಂ, ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು.

    *  ಕಂದಾಯ ಹಾಗೂ ಭೂಮಾಪನ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲಿಸಿ ರಸ್ತೆ ಇದೆ ಅಥವಾ ರಸ್ತೆ ಇಲ್ಲಾ ಎಂದು  ಖಾತರಿ ಪಡಿಸುವವರೆಗೂ ಮತ್ತು ಪರ್ಯಾಯ ರಸ್ತೆ ಮಾಡಿಕೊಡುವವರೆಗೂ ಬಲಾಢ್ಯರು ಒತ್ತುವರಿ ಮಾಡಿಕೊಂಡಿರುವ ರಸ್ತೆಯನ್ನ ಕೂಡಲೇ ತೆರವುಗೊಳಿಸಿ ದಲಿತ ಕುಟುಂಬಗಳು ತಮ್ಮ ಜಮೀನುಗಳಿಗೆ ಹಾದು ಹೋಗಲು ಅವಕಾಶ ಮಾಡಿಕೊಡಬೇಕು.

    * ಕಾಲಮಿತಿಯಲ್ಲಿ ದಲಿತರ ಸಮಸ್ಯೆಗಳನ್ನು ಬಗೆಹರಿಸದೆ ವಿನಾಕಾರಣ ಉದಾಸಿನತೆ ತೋರಿ ಕರ್ತವ್ಯ ಲೋಪವೆಸಗಿ ಬೆಳೆ ಹಾಳಾಗಲು ಕಾರಣರಾದ ಅಧಿಕಾರಿಗಳ ವಿರುದ್ಧ ಪ.ಜಾ/ಪ.ಪಂ. ದೌರ್ಜನ್ಯ ತಡೆಯ ಕಾಯ್ದೆ 1989 ಸೆಕ್ಷನ್ 4ರ ಅಡಿ ಪ್ರಕರಣ ದಾಖಲಿಸಬೇಕು.

    *  ದೌರ್ಜನ್ಯಕ್ಕೊಳಗಾಗಿ ಬೆಳೆದ ಬೆಳೆ ಕಳೆದುಕೊಂಡ ದಲಿತ ಕುಟುಂಬಗಳಿಗೆ ಬೆಳೆ ನಷ್ಟದ ಪರಿಹಾರ ಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026

    ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ

    April 13, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.