ಬೀದರ್: ಜಿಲ್ಲೆಯ ಕಮಲನಗರ ತಾಲ್ಲೂಕಿನ ಠಾಣಕುಶನೂರು ಗ್ರಾಮದ ಮುಖಂಡ ಹಾಗೂ ಪತ್ರಕರ್ತ ರವಿ ವಲ್ಲಾಪುರೆ ಅವರ ಮಾವನವರಾದ ಕಂಟೆಪ್ಪಾ ಜಿರ್ಗೆ (65) ಅವರು ಪ್ರಯಾಗರಾಜ್ ಕುಂಭಮೇಳಕ್ಕೆ ಹೋಗಿ, ವಾಪಸ್ ಆಗುತ್ತಿದ್ದ ವೇಳೆ ಉತ್ತರ ಪ್ರದೇಶದ ಕಾಶಿಯಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಹೃದಯಾಘಾತದಿಂದ ಮೃತರಾಗಿದ್ದಾರೆ.
ಮೃತರು ಧರ್ಮಪತ್ನಿ, ಮೂರು ಜನ ಅಣ್ಣಂದಿರು, ಓರ್ವ ತಮ್ಮ, ಮೂವರು ಅಕ್ಕಂದಿರು, ನಾಲ್ಕು ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗ ಸಮೇತ ಅಪಾರ ಬಳಗವನ್ನು ಅಗಲಿದ್ದಾರೆ.
ಇಂದು ನಾಲ್ಕು ಗಂಟೆಗೆ ಸ್ವಗ್ರಾಮ ಕುಕನೂರಿನ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4