nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೀತ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ: ಜಿ.ಪ್ರಭು
    ತುಮಕೂರು February 13, 2025

    ಜೀತ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ: ಜಿ.ಪ್ರಭು

    By adminFebruary 13, 2025No Comments3 Mins Read
    jitha

    ತುಮಕೂರು:  ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು ಅವರು ಹೇಳಿದರು.

    ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಮತ್ತು ಕಾರ್ಯಾಗಾರ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ಕಳೆದರೂ ಜೀತ ಪದ್ಧತಿ ಇನ್ನೂ ಜೀವಂತವಾಗಿರುವುದು ಶೋಚನೀಯ ಸಂಗತಿ. ಆರ್ಥಿಕವಾಗಿ ಹಿಂದುಳಿದವರು ಜೀತ ಪದ್ಧತಿಗೆ ಒಳಗಾಗುತ್ತಾರೆ. ಜೀತ ಪದ್ಧತಿಯಿಂದ ಮಾನವ ಹಕ್ಕುಗಳಿಗೆ ಚ್ಯುತಿಯುಂಟಾಗುತ್ತದೆ. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಜೀತ ಪದ್ಧತಿ, ಸತಿ ಸಹಗಮನ, ಅಸ್ಪೃಶ್ಯತೆ, ಮಾನವ ಕಳ್ಳಸಾಗಾಣಿಕೆ, ಮ್ಯಾನ್ಯುಯಲ್ ಸ್ಕ್ಯಾಯವೆಂಜಿಂಗ್‌ ಗಳಂತಹ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆಗೊಳಿಸುವಲ್ಲಿ ಯಶಸ್ವಿ ಹೆಜ್ಜೆಗಳನ್ನು ಹಾಕುತ್ತಿದ್ದೇವೆ ಎಂದು ತಿಳಿಸಿದರು.


    Provided by
    Provided by

    ಜೀತ ಪದ್ಧತಿ ನಿರ್ಮೂಲನೆ ಕಾಯ್ದೆಯು 1976ರಲ್ಲಿ ಜಾರಿಗೆ ತರಲಾಗಿದ್ದು, ಕಾಯ್ದೆಯ ಅನುಷ್ಟಾನದ ಜವಾಬ್ದಾರಿಯನ್ನು ಎಲ್ಲ ಅಧಿಕಾರಿಗಳಿಗೆ ನೀಡಲಾಗಿದೆ. ಜೀತ ಪದ್ಧತಿಗೆ ಬಡತನವೇ ಮುಖ್ಯ ಕಾರಣ. ಜೀತ ಕಾರ್ಮಿಕರನ್ನು ಮುಖ್ಯ ವಾಹಿನಿಗೆ ತರುವ ಹೊಣೆಗಾರಿಕೆ ಎಲ್ಲ ಅಧಿಕಾರಿಗಳ ಮೇಲಿದೆ. ಜೀತ ವಿಮುಕ್ತರಿಗೆ ಕಾಯ್ದೆಗಳ ಮೂಲಕ ಭದ್ರತೆ ಒದಗಿಸಿ ಪುನರ್ವಸತಿ ಕಲ್ಪಿಸಬೇಕು. ಜೀತ ನಿರ್ಮೂಲನಾ ಕಾಯ್ದೆಯಿಂದ ಜೀತ ಪದ್ಧತಿಯನ್ನು ತಡೆಯುವುದಷ್ಟೇ ಅಲ್ಲದೆ ಜೀತ ವಿಮುಕ್ತ ವ್ಯಕ್ತಿಗೆ ಜೀವನ ನಿರ್ವಹಣೆಗಾಗಿ ಉದ್ಯೋಗ ನೀಡಿ ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಹೇಳಿದರು.

    ಜೀತಗಾರ ಬಿಡುಗಡೆಯಾಗಬೇಕು–ಆಳುವ ವ್ಯಕ್ತಿಯಾಗಬೇಕು:

    ಪ್ರಾಸ್ತಾವಿಕವಾಗಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ, ಮನುಷ್ಯನ ಹುಟ್ಟು–ಸಾವಿನ ನಡುವೆ ದುಡಿಮೆ ಅನಿವಾರ್ಯ. ಮನುಷ್ಯನು ಹೇಗೆ ದುಡಿಯಬೇಕು? ಯಾವಾಗ ದುಡಿಯಬೇಕು? ಎಷ್ಟು ದುಡಿಯಬೇಕು? ಎನ್ನುವುದು ಬಹಳ ಮುಖ್ಯವಾಗಿರುತ್ತದೆ. ಯಾವುದೇ ಚಲನ-ವಲನಕ್ಕೆ ಸ್ವತಂತ್ರವಿಲ್ಲದೆ ಒಬ್ಬ ವ್ಯಕ್ತಿಯನ್ನು ಹಿಡಿತದಲ್ಲಿಟ್ಟುಕೊಂಡು ಬದುಕಿಗೆ ನಿರ್ಬಂಧ ಹೇರುವುದೇ ಜೀತ ಪದ್ಧತಿ. ಮನುಷ್ಯನ ದುಡಿಮೆಯಲ್ಲಿ ಇತಿಮಿತಿ ಇರಬೇಕು. ನಿರಂತರ ಸೇವೆಯ ನಡುವೆ ವಿಶ್ರಾಂತಿ ನೀಡುವುದು ಅವಶ್ಯ. ಸಾಯುವವರೆಗೆ ಯಜಮಾನನ ಕಪಿಮುಷ್ಠಿಯಲ್ಲಿ ದುಡಿಯುವ ಜೀತ ಕಾರ್ಮಿಕರನ್ನು ಮುಖ್ಯವಾಹಿನಿಗೆ ತರಲು ಹಾಗೂ ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸರ್ಕಾರದೊಂದಿಗೆ ಹಲವಾರು ಸಂಘಟನೆಗಳು ಕೈಜೋಡಿಸುತ್ತಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.

    ಜೀತ ಕಾರ್ಮಿಕ ಪದ್ಧತಿಯು ಮಾನವ ಕಳ್ಳಸಾಗಣೆಯ ಒಂದು ಬಲವಂತದ ರೂಪವಾಗಿದ್ದು, ಈ ಪದ್ಧತಿಯಲ್ಲಿ ಕಾರ್ಮಿಕರು ಭಾರತೀಯ ಸಂವಿಧಾನವು ಖಾತರಿಪಡಿಸಿರುವ ಸ್ವಾತಂತ್ರ್ಯ  ಮತ್ತು ಹಕ್ಕುಗಳನ್ನು ಕಳೆದುಕೊಳ್ಳುವಂತೆ ಒತ್ತಾಯಿಸಲಾಗುತ್ತದೆ. ಜೀತ ಪದ್ಧತಿ ಕಂಡು ಬಂದವರು ಕಾರ್ಮಿಕ ಸಹಾಯವಾಣಿ 155214ಕ್ಕೆ ಮಾಹಿತಿ ನೀಡುವ ಮೂಲಕ ಈ ಅನಿಷ್ಠ ಪದ್ಧತಿಯನ್ನು ರದ್ದುಗೊಳಿಸುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು.

    1206 ರಿಂದ 1296ರ ಅವಧಿಯಲ್ಲಿ ಗುಲಾಮಿ ಸಂತತಿ ಆಡಳಿತ ನಡೆಸಿದ ನಿದರ್ಶನವಿದೆ. ಈ ನಿಟ್ಟಿನಲ್ಲಿ ಜೀತಗಾರ ಜೀತದಿಂದ ಬಿಡುಗಡೆಯಾಗಿ ಆಳುವ ವ್ಯಕ್ತಿಯಾದಾಗ ಮಾತ್ರ ಜೀತ ಪದ್ಧತಿ ನಿರ್ಮೂಲನೆ ಸಾಧ್ಯವೆಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಮುಕ್ತಿ ಅಲೆಯನ್ಸ್ನ ಸಂಚಾಲಕಿ ಬೃಂದ ಆಡಿಗೆ ಅವರು ಮಾತನಾಡುತ್ತಾ, ಜೀತ ಪದ್ಧತಿ ರಾಜ್ಯದಲ್ಲಿ ಇನ್ನು ಚಾಲ್ತಿಯಲ್ಲಿರುವುದು ನೋವಿನ ಸಂಗತಿಯಾಗಿದೆ. ಸಾಲದಾತ ಸಾಲಗಾರನನ್ನು ಜೀತಕ್ಕಿಟ್ಟುಕೊಳ್ಳುವುದು ಕಾನೂನು ಅಪರಾಧವಾಗುತ್ತದೆ. ನಮ್ಮ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರೂ ಗೌರವಯುತವಾಗಿ ಬದುಕಲು ಮೂಲಭೂತ ಹಕ್ಕುಗಳನ್ನು ನೀಡಲಾಗಿದೆ. ಮಾನವ ಹಕ್ಕುಗಳು ಉಲ್ಲಂಘನೆಯಾದರೆ ಕಾನೂನು ನೆರವು ಪಡೆಯಬೇಕು ಎಂದು ಸಲಹೆ ನೀಡಿದರು.

    ಜೀತ ವಿಮುಕ್ತ ಕರ್ನಾಟಕ(ಜೀವಿಕ) ಸಂಘಟನೆಯ ಜಿಲ್ಲಾ ಸದಸ್ಯೆ ಚಿಕ್ಕಮ್ಮ ಮಾತನಾಡಿ, ಇಂತಹ ಕಾರ್ಯಕ್ರಮಗಳಲ್ಲಿ ಜೀತ ವಿಮುಕ್ತ ಕಾರ್ಮಿಕರಿಗೆ ಗೌರವಿಸುವ ಕೆಲಸವಾಗಬೇಕು ಎಂದು ಮನವಿ ಮಾಡಿದ ಅವರು, “ಅಮರ ವೀರ ಅಂಬೇಡ್ಕರ ಸಮರಗೈದೆ ಅಂದು-ಸ್ವಾತಂತ್ರ್ಯ, ಸ್ವಾಭಿಮಾನ, ಸಮಾನತೆ ಎಂದು” ಎಂಬ ಜಾಗೃತಿ ಗೀತೆಯನ್ನು ಹಾಡಿದರು.

    ಜೀತ ಪದ್ಧತಿ ಕುರಿತು ಕಾರ್ಯಕ್ರಮದಲ್ಲಿ ಜೀತ ಪದ್ಧತಿಯಲ್ಲಿ ತೊಡಗಿಕೊಂಡಿದ್ದ ಕುಟುಂಬದವರು ಅಭಿನಯಿಸಿದ ಸಾಕ್ಷ್ಯ ಚಿತ್ರವನ್ನು ಪ್ರದರ್ಶಿಸಲಾಯಿತು.

    ಇದಕ್ಕೂ ಮುನ್ನ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಅವರ ಭಾವಚಿತ್ರಗಳಿಗೆ ಗಣ್ಯರಿಂದ ಪುಷ್ಪ ನಮನ ಸಲ್ಲಿಸಲಾಯಿತು.

    ಉಪ ವಿಭಾಗಾಧಿಕಾರಿ, ಗೌರವ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಮಧುಗಿರಿ ಉಪ ವಿಭಾಗಾಧಿಕಾರಿ ಗೋಟೂರು ಶಿವಪ್ಪ ವಂದಿಸಿದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಹಾಲಸಿದ್ದಪ್ಪ ಪೂಜೇರಿ ಹಾಗೂ ಸಂಜೀವಪ್ಪ, ಯೋಜನಾ ನಿರ್ದೇಶಕ(ಡಿ.ಆರ್.ಡಿ.ಎ) ಎನ್. ನಾರಾಯಣ ಸ್ವಾಮಿ, ತಿಪಟೂರು ಉಪ ವಿಭಾಗಾಧಿಕಾರಿ ಸಪ್ತಶ್ರೀ, ತಹಶೀಲ್ದಾರ್ ರಾಜೇಶ್ವರಿ ಪಿ.ಎಸ್., ಮಧುಗಿರಿ ಡಿಡಿಪಿಐ ಗಿರಿಜಮ್ಮ, ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ, ವಿವಿಧ ತಾಲ್ಲೂಕಿನ ತಹಶೀಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜೀವಿಕ ಸಂಘಟನೆಯ ಜಿಲ್ಲಾ ಸದಸ್ಯರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ…

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.