nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    • ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಖಾಲಿ, ಇದು ‘ಪಾಪರ್’ ಸರ್ಕಾರ: ಆರ್. ಅಶೋಕ್ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರ ಚಿಂತನೆಗಳು ಪ್ರೇರಣದಾಯಕ’
    ತುಮಕೂರು February 14, 2025

    ‘ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರ ಚಿಂತನೆಗಳು ಪ್ರೇರಣದಾಯಕ’

    By adminFebruary 14, 2025No Comments2 Mins Read
    tumakuru vv

    ತುಮಕೂರು: ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರು ಸಮಾಜವಾದಿ ಚಳುವಳಿಯ ಶ್ರೇಷ್ಠ ನಾಯಕರಲ್ಲಿ ಒಬ್ಬರು. ಅವರು ತಮ್ಮ ಜೀವನದ ಉದ್ದಕ್ಕೂ ರೈತರು ಮತ್ತು ದುರ್ಬಲ ವರ್ಗದವರ ಪರವಾಗಿ ಹೋರಾಡಿದರು. ಅವರ ಚಿಂತನೆಗಳು ಮತ್ತು ಹೋರಾಟಗಳು ಇಂದಿಗೂ ಪ್ರೇರಣಾದಾಯಿಯಾಗಿವೆ ಎಂದು ನಿವೃತ್ತ ಮೌಲ್ಯಮಾಪನ ಕುಲ ಸಚಿವ ಡಾ.ಕೆ.ಜೆ.ಸುರೇಶ್ ಅಭಿಪ್ರಾಯಪಟ್ಟರು.

    ತುಮಕೂರು ವಿಶ್ವವಿದ್ಯಾನಿಲಯದ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅಧ್ಯಯನ ಪೀಠ ಮತ್ತು ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಪ್ರೊ.ಎಂ.ಡಿ.ನಂಜುಂಡಸ್ವಾಮಿಯವರು ಹೋರಾಟ ಮತ್ತು ಚಿಂತನೆಗಳು ರೈತರ ಹಕ್ಕುಗಳಿಗಾಗಿ ಮತ್ತು ಆರ್ಥಿಕ ಸುಧಾರಣೆಗಾಗಿ ಮೀಸಲಾಗಿದ್ದವು. ಅವರಿಗೆ ಈ ಮನೋಭಾವ ಮೂಡಲು ಅವರು ಬೆಳೆದ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಹಿನ್ನೆಲೆ ಪ್ರೇರಣೆ ನೀಡಿತು. ಹಾಗಾಗಿ ಅವರು ಸಮಾಜವಾದಿ ಚಳುವಳಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಭಾಗವಹಿಸಿ ರೈತರ ಸಮಸ್ಯೆಗಳನ್ನು ಪರಿಹರಿಸಲು ನಿರಂತರ ಶ್ರಮಿಸಿದರು ಎಂದರು.

    ಭಾರತವು ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ. ನಮ್ಮ ದೇಶದ ಬೆನ್ನೆಲುಬು ರೈತ. ಅತಿ ಹೆಚ್ಚು ಬೆಳೆ ಬೆಳೆಯುವ ಪ್ರದೇಶಗಳು ದೇಶದ ಆರ್ಥಿಕತೆಗೆ ಬಹುಮುಖ್ಯ, ಆದರೆ ನಮ್ಮ ಯುವಜನತೆ ದೇಶ ವಿದೇಶಗಳ ಕಾರ್ಖಾನೆಗಳಲ್ಲಿ ಬಟ್ಟೆ ತಯಾರಿಕೆ, ಜಂಕ್ ಫುಡ್ ತಯಾರಿಕೆಯಂತಹ ಕೆಲಸಗಳಿಗೆ ಸೇರುತಿದ್ದಾರೆಯೇ ಹೊರತು ಭತ್ತ, ಗೋಧಿ, ರಾಗಿ ಬೆಳೆಗಳನ್ನು ಬೆಳೆಯಲು ಏಕೆ ಮುಂದೆ ಬರುತ್ತಿಲ್ಲ ಎಂದು ಪ್ರಶ್ನಿಸಿದರು.

    ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ. ಮಾತನಾಡಿ, ರೈತರ ಸಂಕಷ್ಟಗಳು ಹೆಚ್ಚಾಗುತ್ತಿದ್ದು ನಾವು ಕೇವಲ ವಿದೇಶಿ ಕಂಪನಿಗಳಿಗೆ ಮಣೆ ಹಾಕುತ್ತಿದ್ದೇವೆ. ರೈತರಿಗೆ ವೈಜ್ಞಾನಿಕ ಬೆಲೆ ಸಿಗುವಂತೆ ಮಾಡಬೇಕು. ವಿದ್ಯಾರ್ಥಿಗಳು ತರಗತಿಗಳಿಗೆ ಸೀಮಿತವಾಗಬಾರದು, ಬದಲಿಗೆ ರೈತರ ಕಷ್ಟಗಳನ್ನು ಅರ್ಥ ಮಾಡಿಕೊಂಡು ಅವರ ಬಗ್ಗೆ ಹೆಮ್ಮೆ ಪಡಬೇಕು ಮತ್ತು ಕೃಷಿಯನ್ನು ಗೌರವಿಸಬೇಕು ಎಂದರು.

    ರೈತರ ಮಕ್ಕಳು ಎಂದು ನಾವು ನಾಚಿಕೆ ಪಡಬಾರದು. ಕಠಿಣ ಪರಿಶ್ರಮದಿಂದ ಕಷ್ಟಗಳನ್ನು ಎದುರಿಸಿ ದೇಶದ ಬೆನ್ನೆಲುಬಾಗಿ ನಿಲ್ಲುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದರು.

    ಸ್ನಾತಕೋತ್ತರ ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷರಾದ ಪ್ರೊ.ಜಯಶೀಲ, ಪ್ರೊ.ಎಂ. ಡಿ. ನಂಜುಂಡಸ್ವಾಮಿ ಅಧ್ಯಯನ ಪೀಠದ ನಿರ್ದೇಶಕ ಡಾ.ಮುನಿರಾಜು ಎಂ., ಪ್ರಾಧ್ಯಾಪಕರಾದ ಪ್ರೊ. ವಿಲಾಸ್ ಕದ್ರೋಲ್ಕರ್, ಡಾ. ನೀಲಕಂಠ ಎನ್.ಟಿ. ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆಗೆ ಬಯಲಾಗಿದ್ದು ಹೇಗೆ?

    February 13, 2026

    ತುಮಕೂರು: ಹೆತ್ತ ತಾಯಿಯನ್ನೇ ಮಗಳೊಬ್ಬಳು ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಕಥೆ ಕಟ್ಟಿ ಅಂತ್ಯಕ್ರಿಯೆಗೆ ಮುಂದಾಗಿದ್ದ…

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.