nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026
    Facebook Twitter Instagram
    ಟ್ರೆಂಡಿಂಗ್
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!
    • ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
    • RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
    • ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
    • ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ತುರ್ತಾಗಿ ಗುರುತಿಸಲು ಎಡಿಸಿ ಸೂಚನೆ
    ತುಮಕೂರು February 18, 2025

    ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ತುರ್ತಾಗಿ ಗುರುತಿಸಲು ಎಡಿಸಿ ಸೂಚನೆ

    By adminFebruary 18, 2025No Comments2 Mins Read
    tumakuru adc

    ತುಮಕೂರು: ಬರುವ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಜಿಲ್ಲೆಯಲ್ಲಿರುವ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳನ್ನು ತುರ್ತಾಗಿ ಗುರುತಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಸೋಮವಾರ ಸಂಜೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ಕುಡಿಯುವ ನೀರು ಮತ್ತು ಮೇವಿನ ಸ್ಥಿತಿ–ಗತಿ ಕುರಿತು ಸಭೆ ನಡೆಸಿ ಮಾತನಾಡಿದ ಅವರು, ಮುಂದಿನ 6 ತಿಂಗಳಲ್ಲಿ ಕುಡಿಯುವ ನೀರಿಗೆ ಬವಣೆಯುಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿ ಅಗತ್ಯವಿರುವ ಕಡೆ ತುರ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ನಿರ್ದೇಶನ ನೀಡಿದರು.

    ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಜಿಲ್ಲೆಯಲ್ಲಿರುವ ಎಲ್ಲ ಕೊಳವೆಬಾವಿ, ಆರ್.ಓ. ಘಟಕಗಳನ್ನು ಸುಸ್ಥಿತಿಯಲ್ಲಿಡಬೇಕು. ಕೆಟ್ಟು ನಿಂತಿರುವ ಕೊಳವೆ ಬಾವಿ, ಕುಡಿಯುವ ನೀರಿನ ಘಟಕಗಳನ್ನು ತುರ್ತಾಗಿ ದುರಸ್ತಿಪಡಿಸಬೇಕು ಎಂದು ಸೂಚನೆ ನೀಡಿದರಲ್ಲದೆ ಬೇಸಿಗೆಯಲ್ಲಿ ಜಾನುವಾರುಗಳ ಮೇವು ಹಾಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

    ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಸಂಜೀವಪ್ಪ ಮಾತನಾಡಿ, ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳಿಗೆ ವಿನಿಯೋಗಿಸಲು ಜಿಲ್ಲಾ ಪಂಚಾಯತಿಯಲ್ಲಿ 5 ಕೋಟಿ ರೂ.ಗಳ ಅನುದಾನ ಲಭ್ಯವಿದ್ದು, ಸಂಬAಧಿಸಿದ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ತಾಲ್ಲೂಕು ಕಾರ್ಯಪಡೆ ಸಭೆಯಲ್ಲಿ ಅನುಮೋದನೆ ಪಡೆದು ಗ್ರಾಮಗಳ ಪಟ್ಟಿಯನ್ನು ಜಿಲ್ಲಾ ಪಂಚಾಯತಿಗೆ ಸಲ್ಲಿಸಿದಲ್ಲಿ ಅನುದಾನ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ್ ಮಾತನಾಡಿ, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ 253 ವಾರ್ಡುಗಳ ಪೈಕಿ ಪ್ರಸ್ತುತ ಮಧುಗಿರಿ ಪುರಸಭೆ ವ್ಯಾಪ್ತಿಯ 2 ವಾರ್ಡುಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಉಳಿದಂತೆ ಯಾವುದೇ ವಾರ್ಡುಗಳಲ್ಲಿ ನೀರಿನ ಸಮಸ್ಯೆ ಎದುರಾಗಿಲ್ಲ ಎಂದು ಮಾಹಿತಿ ನೀಡಿದರು.

    ಪಶುಸಂಗೋಪನಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡುತ್ತಾ, ಜಾನುವಾರುಗಳಿಗೆ ಸದ್ಯಕ್ಕೆ ಮೇವಿನ ಕೊರತೆ ಇರುವುದಿಲ್ಲ. ಜಾನುವಾರುಗಳಿಗೆ ಮೇವು ಉತ್ಪಾದಿಸಲು ನೀರಾವರಿ ಸೌಲಭ್ಯವಿರುವ ರೈತರಿಗೆ ಮೇವಿನ ಬೀಜದ ಮಿನಿ ಕಿಟ್ಗಳನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ನಂತರ ಅಪರ ಜಿಲ್ಲಾಧಿಕಾರಿಗಳು ಗ್ರಾಮೀಣ ಪ್ರದೇಶ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಕುಡಿಯುವ ನೀರು ಹಾಗೂ ಜಾನುವಾರು ಮೇವಿಗೆ ಸಂಬಂಧಿಸಿದಂತೆ ತಾಲ್ಲೂಕುವಾರು ಸ್ಥಿತಿ–ಗತಿ ಬಗ್ಗೆ ಪರಿಶೀಲಿಸಿದರು. ಹೊಸದಾಗಿ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಹಾಗೂ ಕೊಳವೆ ಮಾರ್ಗ ಅಳವಡಿಕೆಯನ್ನು ತುರ್ತಾಗಿ ಕೈಗೊಳ್ಳಬೇಕು. ಬರುವ ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಸೂಚನೆ ನೀಡಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮೋಹನ್ ಕುಮಾರ್, ತಹಶೀಲ್ದಾರ್ ರಾಜೇಶ್ವರಿ, ಪಾಲಿಕೆ ಇಂಜಿನಿಯರ್ ಸಂದೀಪ್ ಸೇರಿದಂತೆ ಮತ್ತಿತರರು ಹಾಜರಿದ್ದರು.


    ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ:

    https://chat.whatsapp.com/HEkqDgrW2BlJLad5kZ1DX7

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್‌ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಅಸ್ತು!

    August 10, 2026

    ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಭಾರೀ ಕಾನೂನು…

    ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್

    August 10, 2026

    RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್‌ ಎಸ್‌ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ

    August 10, 2026

    ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.