ಬೆಂಗಳೂರು: ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯದಡಿ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಅಕ್ಕಿಯನ್ನೇ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಒಎಂಎಸ್ಎಸ್ ಯೋಜನೆ ಅಡಿಯಲ್ಲಿ ಖರೀದಿಸಿ ಈ ತಿಂಗಳಿನಿಂದಲೇ ಅಕ್ಕಿ ವಿತರಿಸಲು ತೀರ್ಮಾನಿಸಿದ ಎಂದು ಹೇಳಿದ್ದಾರೆ.
ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ 10 ಕೆ.ಜಿ. ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿತ್ತು.
ನಂತರದ ದಿನಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಕೊಟ್ಟು, ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ನೀಡಲಾಗುತ್ತಿತ್ತು ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4