nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ

    October 6, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ
    • ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ
    • ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ
    • ಖಾತೆದಾರನ ಗಮನಕ್ಕೆ ಬಾರದೇ ಫೋನ್ ಪೇಯಲ್ಲಿ 7.87 ಲಕ್ಷ ವರ್ಗಾವಣೆ!: ದೂರು ದಾಖಲು
    • ಖಾಸಗಿ ಕಂಪನಿ ಉದ್ಯೋಗ ತೊರೆದು ಏಲಕ್ಕಿ ಬಾಳೆ ಬೆಳೆದು ಲಾಭ ಗಳಿಸಿದ ರೈತ
    • ತುಮಕೂರು ಜಿಲ್ಲೆಯಲ್ಲಿ ಚಿರತೆ ಕಾರ್ಯಪಡೆ ರಚನೆ
    • ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ
    • ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ ರಾಜ್ಯಾದ್ಯಂತ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್
    ತುಮಕೂರು February 20, 2025

    ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ ರಾಜ್ಯಾದ್ಯಂತ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್

    By adminFebruary 20, 2025No Comments3 Mins Read
    dinesh gundu rao

    ತುಮಕೂರು: ರಾಜ್ಯದ 80 ತಾಲ್ಲೂಕು ಆಸ್ಪತ್ರೆಗಳಲ್ಲಿ ಆರಂಭಿಸಿರುವ ‘ಪುನೀತ್ ರಾಜ್‌ಕುಮಾರ್’ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರವರು ಹೇಳಿದರು.

    ನಗರದ ಶಿರಾರಸ್ತೆಯ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ಸ್ಥಾಪಿಸಿರುವ 2ನೇ ಕ್ಯಾಥ್ ಲ್ಯಾಬ್‌ ನ್ನು ಫೆ.19 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸಿ ಅವರು ಮಾತನಾಡುತ್ತಾ,  ಹೃದಯ ಜ್ಯೋತಿ ಸೌಲಭ್ಯದಿಂದ ಈವರೆಗೆ ಸುಮಾರು 250 ಕ್ಕೂ ಹೆಚ್ಚು ಜನರ ಜೀವ ಕಾಪಾಡಲಾಗಿದೆ ಎಂದು ತಿಳಿಸಿದರು.


    Provided by
    Provided by
    Provided by

    ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೆ–ಕೇರ್ ಮತ್ತು ಕಿಮೋಥೊರಫಿ ಸೌಲಭ್ಯ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು ಸದ್ಯದಲ್ಲಿಯೇ ಈ ಯೋಜನೆಗೆ ಚಾಲನೆ ನೀಡಲಾಗುವುದು. ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಜೊತೆಗೂಡಿ ಜನರಿಗೆ ಗುಣಮಟ್ಟದ ವೈದ್ಯಕೀಯ ಸೌಲಭ್ಯ ಒದಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ತುಮಕೂರಿನ ಶ್ರೀದೇವಿ ಆಸ್ಪತ್ರೆ ಮತ್ತು ಸಿದ್ದಾರ್ಥ ವೈದ್ಯಕೀಯ ಸಂಸ್ಥೆಗಳಿಗೆ ಡೆ-ಕೇರ್ ಮತ್ತು ಕಿಮೋಥೆರಫಿ ಚಿಕಿತ್ಸಾ ನಿರ್ವಹಣೆಯನ್ನು ವಹಿಸಿಕೊಂಡುವುದಾಗಿ ಸಚಿವರು ಪ್ರಕಟಿಸಿದರು.

    ವೈದ್ಯಕೀಯ ಲೋಕದಲ್ಲಿ ಪ್ರತಿನಿತ್ಯ ಹೊಸ–ಹೊಸ ಬದಲಾವಣೆಗಳಾಗುತ್ತವೆ. ಮುಂದಿನ ದಿನಗಳಲ್ಲ್ಲಿ ಕ್ಯಾನ್ಸರ್‌ ನಂತಹ ಮಾರಕ ಕಾಯಿಲೆಗಳಿಗೂ ಪರಿಹಾರ ದೊರಕಲಿದೆ. ಭವಿಷ್ಯದಲ್ಲಿ ಮನುಷ್ಯನ ಆಯಸ್ಸು 120 ವರ್ಷದವರೆಗೂ ಹೋದರೂ ಅಚ್ಚರಿಪಡಬೇಕಿಲ್ಲ ಎಂದು ಅವರು ನುಡಿದರು.

    ರೋಗಗಳಿಂದಾಗಿ ಮನುಷ್ಯನ ಜೀವ ಅಪಾಯಕ್ಕೆ ಸಿಲುಕಿದ ಸಂದರ್ಭದಲ್ಲಿ ವೈದ್ಯರಿಗೆ ಮತ್ತು ದಾದಿಯರಿಗೆ ಜೀವ ಉಳಿಸುವಂತಹ ಶಕ್ತಿಯಿರುತ್ತದೆ. ದೇವರಿಗೆ ಬಿಟ್ಟರೇ ಇತಂಹ ಅದ್ಭುತ ಶಕ್ತಿಯಿರುವುದು ವೈದ್ಯಕೀಯ ಸಮುದಾಯಕ್ಕೆ ಮಾತ್ರ. ಹೀಗಾಗಿ ವೈದ್ಯರು ವೃತ್ತಿ ಧರ್ಮ ಕಾಪಾಡಬೇಕು ಎಂದರು. ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುತ್ತಿರುವ ತುಮಕೂರಿನ ಶ್ರೀದೇವಿ ಆಸ್ಪತ್ರೆ ರಾಜ್ಯದ ದೊಡ್ಡ ಆಸ್ತಿಯಾಗಿದ್ದು, ಈ ಭಾಗದಲ್ಲಿ ಒಳ್ಳೆಯ ಹೆಸರು ಗಳಿಸಿ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದರು. ಭವಿಷ್ಯದಲ್ಲಿ ಉಜ್ವಲ ಉಜ್ವಲ ಸಂಸ್ಥೆಯಾಗಿ ಬೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ಸಂದರ್ಭದಲ್ಲಿ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕರಾದ ಡಾ.ಎಂ.ಆರ್.   ಮಾತನಾಡುತ್ತಾ, ದಿನೇಶ್ ಗುಂಡೂರಾವ್ ಅವರ ಪಾತ್ರ ಬಹಳ ಮುಖ್ಯವಾಗಿತ್ತು. ಸರ್ಕಾರಿ ಆಸ್ಪತ್ರೆಗಳ ಸೇವೆಯ ಬಗ್ಗೆ ಜನರಲ್ಲಿ ನಂಬಿಕೆ, ವಿಶ್ವಾಸ ಹೆಚ್ಚಾಗುವಂತೆ ಮಾಡಿದ್ದಾರೆ. ಅನ್ನಭಾಗ್ಯ ಮತ್ತು ಯಶಸ್ವಿನಿ ಯೋಜನೆ ಜಾರಿಗೊಳಿಸುವಲ್ಲಿ ಸಚಿವರ ಪಾತ್ರ ಬಹಳ ಮುಖ್ಯವಾಗಿತ್ತು. ಈಗಿನ ಕಾಲಘಟ್ಟ ಮತ್ತು ಸನ್ನಿವೇಶಕ್ಕೆ ತಕ್ಕಂತೆ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಲ್ಲಿ ಕೆಲವು ಮಾರ್ಪಾಡು ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು. 2ನೇ ಕ್ಯಾಥ್ ಲ್ಯಾಬ್ ಆರಂಭದಿಂದ ಈ ಭಾಗದ ಜನರಿಗೆ ಇನ್ನೂ ಹೆಚ್ಚಿನ ಆರೋಗ್ಯ ಸೇವೆ ಒದಗಿಸಲು ಸಹಕಾರಿಯಾಗಲಿದೆ ಎಂದರು.

    ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಡಾ.ಕೆ.ಆರ್.ಕಮಲೇಶ್ ಮಾತನಾಡುತ್ತಾ,  ದಿವಂಗತ ಮಾಜಿ ಮುಖ್ಯಮುಂತ್ರಿ ಆರ್.ಗುಂಡೂರಾವ್ ಮರೆಯಲಾಗದ ಸಮಾಜಮುಖಿ– ಜನಹಿತ ಕಾರ್ಯಗಳನ್ನು ಮಾಡಿದ್ದು, ಮುಂದಿನ ಪೀಳಿಗೆಗೆ ಇದನ್ನು ಮನವರಿಕೆ ಮಾಡಿಕೊಡುವ ಕೆಲಸ ಮುಖ್ಯವಾಗಿ ಆಗಬೇಕಿದೆ ಎಂದು ಒತ್ತಿ ಹೇಳಿದರು.

    ಇದೇ ಸಂದರ್ಭದಲ್ಲಿ ಎಂ.ನಾಗರಾಜ್ ಜೀವನ ಚರಿತ್ರೆ ಕುರಿತು ಡಾ ಕೆ.ಆರ್. ಕಮಲೇಶ್ ಕನ್ನಡದಲ್ಲಿ ಬರೆದಿದ್ದ “‘A Beacon of Light Dedicated to Srevice – Acharya Dr. M. Nagaraju`s Life Mission’ ಕೃತಿಯನ್ನು ಡಿ.ಆರ್.ಡಿಸೋಜಾ ಇಂಗ್ಲೀಷ್‌ಗೆ ಅನುವಾದ ಮಾಡಿದ್ದು, ಇದನ್ನು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ಲೋಕಾರ್ಪಣೆ ಮಾಡಿದರು.

    ಕಾರ್ಯಕ್ರಮದಲ್ಲಿ ಚಿಕ್ಕನಾಯಕನಹಳ್ಳಿ ಶಾಸಕರಾದ ಸುರೇಶ್‌ಬಾಬು, ಜಪಾನಿನ ಸಿಮಾಂಜೋ ಕಂಪನಿಯ ಭಾರತೀಯ ವ್ಯಾಪಾರ ಅಭಿವೃದ್ಧಿಯ ವ್ಯವಸ್ಥಾಪಕರಾದ ಉಯಾಮಾ ಡೈಕಿ ಮತ್ತು ಭಾರತೀಯ ಗವರ್ನಲ್ ಮ್ಯಾನೇಜರ್ (ಸೇಲ್ಸ್) ರಾಜೀವ್ ಝಾ, ಶ್ರೀದೇವಿ ವೈದ್ಯಕೀಯ ನಿರ್ದೇಶಕ ಡಾ.ರಮಣ್ ಎಂ ಹುಲಿನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್, ಶ್ರೀದೇವಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಲ್.ಹರೇಂದ್ರಕುಮಾರ್, ಶ್ರೀದೇವಿ ಆಸ್ಪತ್ರೆ ಹೃದಯ ರೋಗ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಸುರೇಶ್.ಎಸ್. ಹಾಗೂ ಡಿ.ಹೆಚ್.ಓ, ಡಾ.ಚಂದ್ರಶೇಖರ್, ಜಿಲ್ಲಾ ಸರ್ಜನ್ ಡಾ.ಅಜ್ಗರ್‌ಬೇಗ್, ಶ್ರೀದೇವಿ ಆಸ್ಪತ್ರೆಯ ನೇತ್ರ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರಾದ ಡಾ.ಪಿ.ಲಾವಣ್ಯ, ಶ್ರೀದೇವಿ ಚಾರಿಟಬಲ್ ಟ್ರಸ್ಟ್  ಟ್ರಸ್ಟಿಯಾದ ಅಂಬಿಕಾ ಎಂ ಹುಲಿನಾಯ್ಕರ್, ಉಪಪ್ರಾಂಶುಪಾಲರಾದ ಡಾ.ರೇಖಾಗುರುಮೂರ್ತಿ, ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಅಧೀಕ್ಷಕರಾದ ಡಾ.ಕೆ.ಮೋಹನ್‌ಕುಮಾರ್, ಶ್ರೀದೇವಿ ವೈದ್ಯಕೀಯ ಆಡಳಿತ ವಿಭಾಗದ ಉಪಪ್ರಾಂಶುಪಾಲರಾದ ಡಾ.ಎಂ.ಎನ್.ಹೇಮಂತ್‌ರಾಜ್, ಶ್ರೀದೇವಿ ಆಸ್ಪತ್ರೆಯ ಸಿ.ಎ.ಓ ಡಾ.ಪ್ರದೀಪ್‌ ಕುಮಾರ್ ವೆಗ್ಗಿ, ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ನರೇಂದ್ರವಿಶ್ವನಾಥ್, ಪ್ರಜಾಪ್ರಗತಿ ಸಂಪಾದಕರಾದ ಎಸ್.ನಾಗಣ್ಣ ಮುಂತಾದವರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ

    October 6, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್ ರದ್ಧತಿ ವಿರುದ್ಧ ಪ್ರತಿಭಟನೆ

    October 6, 2025

    ತುಮಕೂರು(ನಮ್ಮ ತುಮಕೂರು):  ರಾಜ್ಯ ಸರ್ಕಾರ ಬಡ ಜನರ ವಿರೋಧಿ ನೀತಿ ಕೈಬಿಡಿ ಎಂದು ಒತ್ತಾಯಿಸಿ, ಅವೈಜ್ಞಾನಿಕ ಬಿಪಿಎಲ್ ಪಡಿತರ ಕಾರ್ಡ್…

    ಕೆರೆಗೆ ರಾಸಾಯನಿಕ ತ್ಯಾಜ್ಯ ಸುರಿದ ಆರೋಪ: ಮೂವರ ಬಂಧನ

    October 6, 2025

    ಮನೆಯಲ್ಲಿದ್ದುಕೊಂಡೇ ಹಣ ಗಳಿಕೆ:  ಫ್ಲಿಪ್‌ ಕಾರ್ಟ್ ಹೆಸರಲ್ಲಿ ವಂಚನೆ

    October 6, 2025

    ಖಾತೆದಾರನ ಗಮನಕ್ಕೆ ಬಾರದೇ ಫೋನ್ ಪೇಯಲ್ಲಿ 7.87 ಲಕ್ಷ ವರ್ಗಾವಣೆ!: ದೂರು ದಾಖಲು

    October 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.