ಬೀದರ್ : ಆಸ್ಪತ್ರೆಗೆ ಬರುವ ಸಾಮಾನ್ಯ ಹಾಗೂ ಬಡ ರೋಗಿಗಳಿಗೆ ಅಗತ್ಯ ತುರ್ತು ಔಷಧಿಗಳು ಲಭ್ಯವಾಗುವಂತೆ ಆರೋಗ್ಯಾಧಿಕಾರಿಗಳು ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ ನೀಡಿದರು.
ಬಿದ್ರಿ ಕಾಲೋನಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಹೊರ ರೋಗಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಅವರು ಮಾತನಾಡಿದರು.
ಹಾವು ಮತ್ತು ನಾಯಿ ಕಡಿತ ಸೇರಿದಂತೆ ಇತರ ತುರ್ತು ಔಷಧಿಗಳು ಆಸ್ಪತ್ರೆಗೆಯಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರವಹಿಸಿ ಎಂದು ನಗರಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿವಶಂಕರ್ ಟಿ. ಅವರಿಗೆ ಸೂಚನೆ ನೀಡಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4