ಬೀದರ್ : ಬೀದರ್ ಜಿಲ್ಲೆಯಿಂದ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳುತ್ತಿದ್ದವರು ಭೀಕರ ಅಪಘಾತಕ್ಕೆ ಬಲಿಯಾದ ಹಿನ್ನೆಲೆ ಮೃತಪಟ್ಟವರ ಮನೆಗೆ ಸಂಸದ ಸಾಗರ್ ಖಂಡ್ರೆ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಜಿಲ್ಲೆಯ ಯಾತ್ರಿಕರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಸುದ್ದಿ ಆಘಾತ ತಂದಿದೆ. ಆ ಕುಟುಂಬಸ್ಥರ ದುಃಖದಲ್ಲಿ ನಾವು ಸಹಭಾಗಿಯಾಗಿದ್ದೇವೆ ಎಂದು ಅವರು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಈಗಾಗಲೇ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ನಾನು ಸಹ ಸರ್ಕಾರದಿಂದ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಮತ್ತು ನೆರವು ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ದಾರುಣ ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4