ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶ್ರೀ ಸಿದ್ದಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತುಪ್ರದರ್ಶನ ಟ್ರಸ್ಟ್ ಸಹಯೋಗದಲ್ಲಿ ಮಾರ್ಚ್ 2ರಂದು ಭಾನುವಾರ ಮಧ್ಯಾಹ್ನ 3 ಗಂಟೆಗೆ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿ “ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ”ಯನ್ನು ಆಯೋಜಿಸಲಾಗಿದೆ.
ವಿಜೇತ ತಂಡಗಳಿಗೆ ನಗದು ಬಹುಮಾನ, ಪಾರಿತೋಷಕ, ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಗುವುದು. ಆಸಕ್ತ ತಂಡಗಳು ಮಾರ್ಚ್ 1ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು ಕಚೇರಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9980588415/ 9741291379ನ್ನು ಸಂಪರ್ಕಿಸಬೇಕೆAದು ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4