ಡಿಯೋರಿಯಾ: 52 ವರ್ಷದ ವ್ಯಕ್ತಿಯೊಬ್ಬ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ.
ನೆರೆಹೊರೆಯ ವ್ಯಕ್ತಿಯಿಂದಲೇ ಈ ಕೃತ್ಯ ನಡೆದಿದೆ. ಬಾಲಕಿಯ ಕಿರುಚಾಟ ಕೇಳಿ ಸ್ಥಳಕ್ಕೆ ತಾಯಿ ಓಡಿ ಬಂದಿದ್ದು, ಈ ವೇಳೆ ತಾಯಿಯನ್ನು ಬೆದರಿಸಿ ಸ್ಥಳದಿಂದ ಆರೋಪಿ ಓಡಿ ಹೋಗಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ವೀರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಘಟನೆಯ ಬೆನ್ನಲ್ಲೇ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನೊಂದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಡಿಯೋರಿಯಾದ ಮಹರ್ಷಿ ದೇವರಾಹ ಬಾಬಾ ವೈದ್ಯಕೀಯ ಕಾಲೇಜಿಗೆ ಕಳುಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4