ಜೈಪುರ: ರಾಜಸ್ಥಾನದ ಚಿನ್ನದ ಪದಕ ವಿಜೇತ ಕ್ರೀಡಾಪಟುವೊಬ್ಬರು ಪವರ್-ಲಿಫ್ಟರ್ ಅಭ್ಯಾಸದ ವೇಳೆ 270 ಕೆಜಿ ರಾಡ್ ಕುತ್ತಿಗೆಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಜೂನಿಯರ್ ರಾಷ್ಟ್ರೀಯ ಕ್ರೀಡಾಕೂಟದ ಚಿನ್ನದ ಪದಕ ವಿಜೇತ ಮಹಿಳಾ ಪವರ್‌ಲಿಫ್ಟರ್ ಯಶ್ತಿಕಾ ಆಚಾರ್ಯ (17) ಮೃತಪಟ್ಟವರಾಗಿದ್ದಾರೆ.
ಅವಘಡ ನಡೆದ ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆಯ ಸಂದರ್ಭದಲ್ಲಿ ತರಬೇತುದಾರರಿಗೂ ಗಾಯಗಳಾಗಿವೆ.
ಮರಣೋತ್ತರ ಪರೀಕ್ಷೆಯ ನಂತರ ಬುಧವಾರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಘಟನೆ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4