ಆಗ್ರಾ: ವಾರಣಾಸಿ–ಜೈಪುರ ಬಸ್ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟು, 19 ಮಂದಿಗೆ ಗಾಯಗಳಾಗಿವೆ.
ಆಗ್ರಾದ ಫತೇಹಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ 5.30 ರ ಸುಮಾರಿಗೆ ಬಸ್ ಹಿಂದಿನಿಂದ ಟ್ರಕ್ ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ರಾಜಸ್ಥಾನ ಮೂಲದ ಗೋವಿಂದ್ (68), ರಮೇಶ್ (45) ಮತ್ತು ಆಗ್ರಾ ನಿವಾಸಿ ದೀಪಕ್ ವರ್ಮಾ (40) ಮೃತಪಟ್ಟವರಾಗಿದ್ದಾರೆ. ಮೃತರಲ್ಲಿ ಒಬ್ಬರನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಫತೇಹಾಬಾದ್ ಎಸಿಪಿ ಅಮರ್ದೀಪ್ ಲಾಲ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4