ಕೊರಟಗೆರೆ: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಪ್ರಥಮ ಭಾಷೆ ಕನ್ನಡ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದರು.
ಕೊರಟಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮುಂಭಾಗದಲ್ಲಿ ಪೊಲೀಸ್ ಬಿಗಿ ಭದ್ರತೆ ನಡೆಸಲಾಗಿದೆ. ಕೊರಟಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 889 ವಿದ್ಯಾರ್ಥಿಗಳು ಪ್ರಥಮ ಭಾಷೆ ಕನ್ನಡ ಪರೀಕ್ಷೆ ಬರೆಯುತ್ತಿದ್ದಾರೆ.
ವಿಶೇಷ ಚೇತನ ವಿದ್ಯಾರ್ಥಿನಿಗೆ ವೀಲ್ ಚೇರ್ ನೀಡದೇ ಶಿಕ್ಷಣ ಇಲಾಖೆ ದಿವ್ಯ ನಿರ್ಲಕ್ಷವಹಿಸಿದೆ. ದ್ವಿತೀಯ ಪಿಯುಸಿ ಕನ್ನಡ ವಿಷಯದ ಪರೀಕ್ಷೆ ಬರೆಸಲು ಪದವಿಪೂರ್ವ ಕಾಲೇಜಿಗೆ ಬಂದಿರುವ ವಿಶೇಷ ಚೇತನ ವಿದ್ಯಾರ್ಥಿನಿಯನ್ನು ವೀಲ್ ಚೇರ್ ಇಲ್ಲದ ಕಾರಣ ಪರೀಕ್ಷಾ ಕೊಠಡಿಗೆ ತಾಯಿ ಎತ್ತಿಕೊಂಡು ಹೋದ ದೃಶ್ಯ ಕಂಡು ಬಂತು.
ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯುತ್ತಿದೆ. ಕೊರಟಗೆರೆ ತಾಲೂಕಿನ 11ಪಿಯುಸಿ ಕಾಲೇಜಿನ 897 ವಿದ್ಯಾರ್ಥಿಗಳಿಗೆ 33 ಕೊಠಡಿಯೊಳಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ವರದಿ : ಮಂಜುಸ್ವಾಮಿ ಎಂ ಎನ್ ಕೊರಟಗೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4