ಕೊರಟಗೆರೆ : ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರ ಸ್ಥಾನವು ತೆರವಾಗಿದ್ದ ಕಾರಣ ಇಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು.
ಅಧ್ಯಕ್ಷ ಸ್ಥಾನಕ್ಕೆ ಜಿ.ಎಂ.ಶಿವಾನಂದ್ ಹೊರತು ಪಡಿಸಿ ಯಾರು ಕೂಡ ಚುನಾವಣೆಯಲ್ಲಿ ಸ್ಪರ್ಧಿಸದ ಕಾರಣ ಈ ಚುನಾವಣೆಯಲ್ಲಿ ಎಲ್ಲಾ ನಿರ್ದೇಶಕರ ಸಹಕಾರದಿಂದ ಜಿ.ಎಂ.ಶಿವಾನಂದ್ ಅವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಂತರ ಅವರು ಮಾತನಾಡಿ, ನನ್ನನ್ನು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲು ಸಹಕರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್ .ರಾಜಣ್ಣ ನವರಿಗೆ ಹಾಗೂ ಎಲ್ಲಾ ನಿರ್ದೇಶಕರುಗಳಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಎಲ್ಲರ ಮಾರ್ಗದರ್ಶನದಂತೆ ರೈತರಿಗೆ ಅನುಕೂಲವಾಗುವ ಕೆಲಸಗಳನ್ನು ಮಾಡುತ್ತಾ, ಸಹಕಾರ ಸಂಘವನ್ನ ಎಲ್ಲ ಸದಸ್ಯರ ಒಟ್ಟುಗೂಡಿ ಮತ್ತಷ್ಟು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತೇವೆ ಹಾಗೂ ತಾಲ್ಲೂಕಿನ ರೈತರ ಜೊತೆ ನಮ್ಮ ಸಹಕಾರ ಸಂಘ ನಿರಂತರವಾಗಿ ಇರುತ್ತದೆ ಯಾವುದೇ ತೊಂದರೆ ಆಗದಂತೆ ಉತ್ತಮವಾಗಿ ಕರ್ತವ್ಯ ನಿಷ್ಠೆಯಿಂದ ನಿಭಾಯಿಸುತ್ತೇನೆ ಎಂದರು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವಥ್ ನಾರಾಯಣ್ ಮಾತನಾಡಿ, ಸಹಕಾರ ಸಂಘದ ಎಲ್ಲಾ ನಿರ್ದೇಶಕರ ಸಹಕಾರದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಯಶಸ್ವಿಯಾಗಿ ನಡೆದು ಜಿ.ಎಂ.ಶಿವಾನಂದ್ ರವರು ಎಲ್ಲಾ ನಿರ್ದೇಶಕರ ಬೆಂಬಲ ಮತ್ತು ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿ ನೂತನ ಅಧ್ಯಕ್ಷರಾಗಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ರವರ ಮಾರ್ಗದರ್ಶನದಂತೆ ಇನ್ನು ಮುಂದೆ ಸಹಕಾರ ಸಂಘವು ಕೆಲಸ ಮಾಡಲದೆ ತಾಲೂಕಿನ ಎಲ್ಲಾ ರೈತರಿಗೆ ಸಹಕಾರ ಸಂಘದಿಂದ ಸಿಗುವಂತಹ ಎಲ್ಲ ಸವಲತ್ತುಗಳು ರೈತರಿಗೆ ಸಿಗುವಂತಾಗಲಿ ಎಂದು ತಿಳಿಸಿದರು.
ಜಿ.ಎಂ.ಶಿವಾನಂದ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಸಹಕಾರ ಸಂಘದ ಕಚೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.ಸಹಕಾರ ಸಂಘದ ಸಿಡಿಒ ರಾಘವೇಂದ್ರ ಎ ಆರ್ ಸಿ ಓ ಸಣ್ಣಪ್ಪಯ್ಯ ಚುನಾವಣಾ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿ ಯಶಸ್ವಿಗೊಳಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶ್ವಥ್ ನಾರಾಯಣ್ ಅರಕೆರೆ ಶಂಕರ್, ಪಟ್ಟಣ ಪಂಚಾಯಿತಿ ಸದಸ್ಯ ಎ.ಡಿ.ಬಲರಾಮಯ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಹನುಮಾನ್, ಪ.ಪಂ.ಮಾಜಿ ಉಪಾಧ್ಯಕ್ಷ ಕೆ.ವಿ.ಮಂಜುನಾಥ್ ಮುಖಂಡರಾದ ಮಹಾಲಿಂಗಪ್ಪ, ಹುಲೀಕುಂಟೆ ಪ್ರಸಾದ್, ವಿ ಎಸ್ ಎಸ್ ಎನ್ ಅಧ್ಯಕ್ಷರಾದ ವಿನಯ್ ಕುಮಾರ್, ಕಾರ್ ಮಹೇಶ್, ಪವನ್, ನಾಗಭೂಷಣ್ ಹಾಗೂ ಉಪಾಧ್ಯಕ್ಷರಾದ ಕೆ.ಆರ್. ರಾಘವೇಂದ್ರ ನಿರ್ದೇಶಕರಾದ ಈಶಪ್ರಸಾದ್, ಕುಂಬಿ ನರಸಿಂಹಯ್ಯ, ಉಮಾದೇವಿ, ರಂಗದಾಸೇಗೌಡ, ಶಶಿಕಲಾ, ಸುನೀತಾ ಸೇರಿದಂತೆ ಇತರರು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4