ಆಳಪ್ಪುಳ: ಗಂಟಲಲ್ಲಿ ಜೀವಂತ ಮೀನು ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದ್ದು, ಮೀನು ಹಿಡಿಯುತ್ತಿದ್ದ ವೇಳೆ ಈ ಘಟನೆ ಆಕಸ್ಮಿಕವಾಗಿ ನಡೆದಿದೆ ಎಂದು ತಿಳಿದು ಬಂದಿದೆ.
ಪುತ್ತುಪ್ಪಳ್ಳಿ ನಿವಾಸಿ ಆದರ್ಶ್ ಅಲಿಯಾಸ್ ಉನ್ನಿ(25) ಮೃತಪಟ್ಟ ಯುವಕನಾಗಿದ್ದಾನೆ. ಭಾನುವಾರ ಸಂಜೆ ಸುಮಾರು 4:30ರ ವೇಳೆ ಈ ಘಟನೆ ನಡೆದಿದೆ. ಸ್ನೇಹಿತರೊಂದಿಗೆ ಭತ್ತದ ಗದ್ದೆಯಲ್ಲಿ ಮೀನು ಹಿಡಿಯಲು ಉನ್ನಿ ತೆರಳಿದ್ದು, ಈ ವೇಳೆ ಒಂದು ಮೀನನ್ನು ಹಿಡಿದು, ಬಾಯಲ್ಲಿ ಹಿಡಿದುಕೊಂಡು ಇನ್ನೊಂದು ಮೀನನ್ನು ಹಿಡಿಯಲು ಆತ ಯತ್ನಿಸಿದ್ದಾನೆ. ಈ ವೇಳೆ ಏಕಾಏಕಿ ಮೀನು ಗಂಟಲೊಳಗೆ ನುಗ್ಗಿದೆ.
ಸ್ನೇಹಿತರು ಮೀನನ್ನು ಹೊರ ತೆಗೆಯಲು ಸಾಕಷ್ಟು ಪ್ರಯತ್ನ ಮಾಡಿದರೂ ಸಾಧ್ಯವಾಗಲಿಲ್ಲ, ಬಳಿಕ ತಕ್ಷಣವೇ ಓಚಿರಾದ ಖಾಸಗಿ ಆಸ್ಪತ್ರೆಗೆ ಆತನನ್ನು ಕರೆದೊಯ್ಯಲಾಯಿತು. ಆದರೆ, ಆದರ್ಶ್ ನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ಘಟನೆ ಸಂಬಂಧ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4