ತುಮಕೂರು : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪರವಾನಗಿ ಪಡೆದು ಕಟ್ಟಡ ನಿರ್ಮಿಸುತ್ತಿರುವ ಸಾರ್ವಜನಿಕರು ಮಳೆ ನೀರು ಕೊಯ್ಲ(Rain water harvesting structure)ನ್ನು ನಿರ್ಮಿಸಿಕೊಳ್ಳಲು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಸೂಚಿಸಿದ್ದಾರೆ.
ಎಲ್ಲಾ ವಸತಿ, ವಾಣಿಜ್ಯ ಹಾಗೂ ಇತರೆ ಕಟ್ಟಡಗಳಿಗೆ ಸಂಬಂಧಿಸಿದಂತೆ 100 ಚದರ ಮೀಟರ್ ಅಥವಾ ಹೆಚ್ಚು ಇರುವ ವಿಸ್ತೀರ್ಣದ ಕಟ್ಟಡಗಳಿಗೆ ಮಳೆ ನೀರು ಕೊಯ್ಲನ್ನು ನಿರ್ಮಿಸಿಕೊಳ್ಳಬೇಕು. ಈ ಕುರಿತು ಪಾಲಿಕೆ ವತಿಯಿಂದ ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿಗಳು ಸ್ಥಳ ಪರಿಶೀಲನೆ ಮಾಡಲಿದ್ದು, ತಪ್ಪಿದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4