ತುಮಕೂರು : ಜಿಲ್ಲೆಯಲ್ಲಿ ಏಪ್ರಿಲ್ 7, 8ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯಲಿದ್ದು, ಕ್ರೀಡಾಕೂಟ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ನೌಕರರು ಕ್ರೀಡಾಕೂಟದಲ್ಲಿ ತಪ್ಪದೆ ಭಾಗವಹಿಸಬೇಕು. ಕ್ರೀಡಾಕೂಟ ಜರುಗಲಿರುವ 2 ದಿನಗಳಂದು ನೌಕರರಿಗೆ ವಸತಿ, ಊಟದ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಚಿಕಿತ್ಸಾ ವಾಹನ, ಪ್ರಥಮ ಚಿಕಿತ್ಸಾ ಘಟಕ, ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್. ನರಸಿಂಹರಾಜು ಮಾತನಾಡಿ, ಕ್ರೀಡಾಕೂಟದಲ್ಲಿ ಭಾಗವಹಿಸಲಿಚ್ಛಿಸುವವರು ತಮ್ಮ ಹೆಸರನ್ನು ಆನ್ ಲೈನ್ ಮುಖಾಂತರ ನೋಂದಣಿ ಮಾಡಿಕೊಳ್ಳಬೇಕು. ಕ್ರೀಡಾಕೂಟಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ರಮೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಅಸ್ಗರ್ ಬೇಗ್, ಹಿಂದುಳಿದ ವರ್ಗಗಳ ಅಭಿವೃದ್ಧಿ ಅಧಿಕಾರಿ ಸೋನಿಯಾ ವರ್ಣೇಕರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಮತ್ತಿತರ ಅಧಿಕಾರಿಗಳು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4