ತುಮಕೂರು : ತುಮಕೂರಿನ ಸಿದ್ಧಗಂಗಾ ಮಠದ ಆವರಣದಲ್ಲಿ ನಡೆದ ಕೃಷಿ ಹಾಗೂ ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ಮೈಸೂರು ವತಿಯಿಂದ ಆಯೋಜಿಸಿದ್ದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಹಾಗೂ ವಿಕಸಿತ ಬಜೆಟ್ @2047 ಛಾಯಾಚಿತ್ರ ಪ್ರದರ್ಶನಕ್ಕೆ ಪ್ರಥಮ ಬಹುಮಾನ ವಿಭಾಗದಲ್ಲಿ ಬಹುಮಾನ ದೊರೆತಿದೆ.
ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ ನಡೆದ ಪ್ರದರ್ಶನದಲ್ಲಿ ವಿಕಸಿತ ಭಾರತ ಬಜೆಟ್ 2025–26, ಪಿಎಂ ಇಂಟರ್ನ್ಶಿಪ್ ಯೋಜನೆ, ಆಯುಷ್ಮಾನ್ ಭಾರತ್, ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ, ಪ್ರಧಾನ ಮಂತ್ರಿ ಮುದ್ರಾ ಯೋಜನೆ, ವೆವ್ಸ್ 2025, ಪಿಎo ಸೂರ್ಯ ಘರ್, ವಿಕಸಿತ ಭಾರತಕ್ಕೆ ಪ್ರಧಾನ ಮಂತ್ರಿಯವರ ದೂರದೃಷ್ಠಿ 2047 ಹಾಗೂ ಇತರೆ ಯೋಜನೆಗಳ ಛಾಯಾಚಿತ್ರ ಪ್ರದರ್ಶನದ ಜೊತೆಗೆ ಯೋಜನೆಗಳ ಫಲಾನುಭವಿಗಳು ಹಂಚಿಕೊಂಡಿರುವ ಅನಿಸಿಕೆಗಳು ಮತ್ತು ಇತರೆ ಮಾಹಿತಿಯನ್ನು ವಿಡಿಯೋ ಮೂಲಕ ಬಿತ್ತರಿಸಲಾಯಿತು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವು ಇಲಾಖೆಗಳು, ಸರ್ಕಾರೇತರ ಸಂಸ್ಥೆಗಳು ವಸ್ತು ಪ್ರದರ್ಶನದ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸಿದ್ದಗಂಗಾ ಮಠದ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಗೌಡ ಬಹುಮಾನ ವಿತರಿಸಿದರು. ತುಮಕೂರಿನ ಪೊಲೀಸ್ ವರಿಷ್ಟಾಧಿಕಾರಿ ಕೆ.ವಿ. ಅಶೋಕ್ ಇತರೆ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೇಂದ್ರ ಸಂವಹನ ಇಲಾಖೆ ಕ್ಷೇತ್ರ ಪ್ರಚಾರ ಅಧಿಕಾರಿ ಶ್ರುತಿ ಎಸ್.ಟಿ., ಕ್ಷೇತ್ರ ಪ್ರಚಾರ ಸಹಾಯಕ ಸಿ.ಕೆ. ಸುರೇಶ್, ಸಿದ್ದಗಂಗಾ ಮಠದ ಕಾರ್ಯದರ್ಶಿ ಬಿ. ಗಂಗಾಧರಯ್ಯ, ಜಂಟಿ ಕಾರ್ಯದರ್ಶಿ ಎಸ್. ಶಿವಕುಮಾರ್, ಕೆ.ಬಿ. ರೇಣುಕಪ್ಪ ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4