ಬೆಂಗಳೂರು: ಕರಾವಳಿ ಪ್ರವಾಸೋದ್ಯಮ ಹೆಚ್ಚು ಜನಪ್ರಿಯವಾಗಿದೆ. ವಾರ್ಷಿಕ 8 ಕೋಟಿ ಪ್ರವಾಸಿಗರು ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಗುರುರಾಜ ಶೆಟ್ಟಿ ಘಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಕರಾವಳಿ ಭಾಗವೂ ಒಳಗೊಂಡಂತೆ ಒಟ್ಟಾರೆ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕರ್ನಾಟಕ ಪ್ರವಾಸೋದ್ಯಮ ನೀತಿ 2024–29 ನ್ನು ಜಾರಿಗೆ ತರಲಾಗಿದೆ ಎಂದರು.
ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ತರುವ ಪ್ರಸ್ತಾವನೆ ಇಲ್ಲ. ಪ್ರವಾಸೋದ್ಯಮ ನೀತಿಯಲ್ಲೇ ಕರಾವಳಿ ಭಾಗದಲ್ಲಿನ ಎಲ್ಲಾ ವರ್ಗದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದರು.
ಕರಾವಳಿ ಹಾಗೂ ಕಡಲತೀರ ಪ್ರದೇಶಕ್ಕೆ ವಿಶೇಷ ಮಹತ್ವ ನೀಡಲಾಗಿದೆ , ಕರಾವಳಿ ಅಭಿವೃದ್ಧಿ ಮಂಡಳಿ ರಚನೆ ಮಾಡುತ್ತೇವೆ. ಭೂ ಬ್ಯಾಂಕ್ ಮಾಡುತ್ತೇವೆ. ಕಂಬಳಕ್ಕೆ ತಲಾ 5 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. 320 ಕಿ.ಮೀ. ಉದ್ದದ ಕರಾವಳಿಯಲ್ಲಿ ಪ್ರವಾಸೋದ್ಯಮ ಇಲಾಖೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4