ನವದೆಹಲಿ: ಸ್ವಇಚ್ಛೆಯಿಂದ ಗ್ಯಾರಂಟಿ ಬಿಟ್ಟು ಕೊಡುವ ವ್ಯವಸ್ಥೆ ತರುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಲವೆಡೆ ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ. ಅದು ಬಡವರಿಗೆ ತಲುಪಬೇಕೆಂದು ತಿಳಿಸಿದ್ದಾರೆ. ಹಾಗಾಗಿ ಗ್ಯಾರಂಟಿ ಬಿಟ್ಟು ಕೊಡುವ ವ್ಯವಸ್ಥೆ ತರುವ ಬಗ್ಗೆ ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.
ಗ್ಯಾರಂಟಿ ಅನುಷ್ಠಾನದ ಬಗ್ಗೆ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್, ಉಸ್ತುವಾರಿ ರಣದೀಪ್ ಸುರ್ಜೇವಾಲಗೆ ಮಾಹಿತಿ ನೀಡಿದ್ದೇನೆ. ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುವ ಬಿಜೆಪಿ ನಾಯಕರು, ಬಡವರಿಗೆ ಬಾಯಿ ಇಲ್ಲ ಅದಕ್ಕೆ ಮಾತನಾಡಲ್ಲ ಎಂದು ಹೇಳುತ್ತಾರೆ. ಆದರೆ ನಾವು ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದರು.
ಎಲ್ಲಾ ಯೋಜನೆಗಳನ್ನು ಕಾರ್ಯಗತಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ, ಮೂರು ತಿಂಗಳ ಕಂತುಗಳು ಬಾಕಿ ಉಳಿದಿವೆ. ಈಗ ಅದನ್ನು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4