ಬೆಂಗಳೂರು: ದಲಿತರ ಹಣ ದುರ್ಬಳಕೆ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಜನಾಂದೋಲನ ರೂಪಿಸಿದೆ. ಅದಕ್ಕೆ ಬಿಜೆಪಿಯ ದಲಿತಪರ ಚಿಂತನೆ, ಅವರ ಪರವಾದ ಯೋಜನೆಗಳೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಈ ವಿಷಯವನ್ನು ತೀಕ್ಷ್ಣವಾಗಿ ಪರಿಗಣಿಸಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷ ತಲೆ ಎತ್ತಿ ತಿರುಗಲಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು.
ಕೌನ್ಸಿಲರ್ ಚುನಾವಣೆ ಹತ್ತಿರದಲ್ಲಿರುವಂತೆ ಕಾಣುತ್ತಿದೆ. ಕೋರ್ಟಿನ ಆದೇಶದ ಕಾರಣ ಚುನಾವಣೆ ನಡೆಯುವ ಸಾಧ್ಯತೆ ಇದೆ. ನಾವು ಜನರನ್ನು ಭೇಟಿ ಮಾಡಿ ಮನೆಮನೆಗೆ ಹೋಗಿ ಅವರನ್ನು ಪ್ರೇರೇಪಿಸಬೇಕು. ಬಿಜೆಪಿ ಕಾರ್ಯಕರ್ತರನ್ನು ನಾವು ಉತ್ತೇಜಿಸಬೇಕು ಎಂದು ಮನವಿ ಮಾಡಿದರು. ಈ ಹೋರಾಟಕ್ಕೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4