ಬೀದರ್: ಭಾಡಸಾಂಗವಿ ಗ್ರಾಮದ ಸಂಗಮ–ಶಿವಣಿ ರಸ್ತೆಯ ಬಳಿ ಅನಧಿಕೃತವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಭಾಲ್ಕಿ ಗ್ರಾಮೀಣ ವೃತ್ತ ಪೊಲೀಸರು ದಾಳಿ ಮಾಡಿ 6,885 ರೂ. ಬೆಲೆ ಬಾಳುವ ಅಕ್ರಮ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಭಾಲ್ಕಿ ಗ್ರಾಮೀಣ ವೃತ್ತದ ಸಿ.ಪಿ.ಐ ಹಣಮರಡ್ಡಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ 6,885 ರೂಪಾಯಿ ಬೆಲೆ ಬಾಳುವ ವಿಸ್ಕಿ ಬಾಟಲ್/ಪೌಚ್ ಗಳನ್ನು ಜಪ್ತಿ ಮಾಡಿಕೊಂಡು ಆರೋಪಿತರ ವಿರುದ್ಧ ಕಾನೂನಿನ ರೀತಿಯ ಕ್ರಮಕೈಕೊಳ್ಳಲಾಗಿದೆ.
ಅಕ್ರಮ ಸರಾಯಿ ಮಾರಾಟದ ಮೇಲೆ ದಾಳಿಯಲ್ಲಿ ಶ್ರಮಿಸಿದ ಭಾಲ್ಕಿ ಗ್ರಾಮೀಣ ವೃತ್ತದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಪ್ರದೀಪ್ ಗುಂಟಿ ಅವರು ಶ್ಲಾಘಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4