ಬೆಂಗಳೂರು: ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


