ತುಮಕೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮಾರ್ಚ್ 8ರಂದು ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಮಹಿಳೆಯರಿಗಾಗಿ ಹಲವಾರು ಮನರಂಜನಾ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಮಹಿಳಾ ಸ್ಪರ್ಧೆಗಳು ಮಾ. 8ರ ಬೆಳಿಗ್ಗೆ 9 ಗಂಟೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಲು ಯಾವುದೇ ಪ್ರವೇಶ ಶುಲ್ಕವಿಲ್ಲ.
ಸ್ಪರ್ಧೆಯಲ್ಲಿ 13 ರಿಂದ 15 ವರ್ಷದೊಳಗಿನವರಿಗೆ ಮ್ಯೂಸಿಕಲ್ ಚೇರ್, 30 ರಿಂದ 40 ವರ್ಷ–ಲೆಮನ್ ಅಂಡ್ ಸ್ಪೂನ್, 15 ರಿಂದ 30ವರ್ಷ—ಹಗ್ಗ–ಜಗ್ಗಾಟ, 40 ರಿಂದ 50ವರ್ಷ–ಸೂಜಿಗೆ ದಾರ ಪೋಣಿಸುವುದು, 50 ರಿಂದ 60 ವರ್ಷ-ಬಾಲ್ ಇನ್ ದ ಬಕೆಟ್ ಕ್ರೀಡೆಗಳು ನಡೆಯಲಿವೆ ಹಾಗೂ ಅಂತ್ಯಾಕ್ಷರಿ (ಚಲನಚಿತ್ರ ಗೀತೆ), ರಂಗೋಲಿ ಸ್ಪರ್ಧೆ, ಬಾಂಬ್ ಇನ್ ದ ಸಿಟಿ ಕ್ರೀಡಾ ಸ್ಪರ್ಧೆಗಳು ನಡೆಯಲಿದ್ದು, ಈ ಸ್ಪರ್ಧೆಗಳಿಗೆ ವಯೋಮಿತಿ ಇರುವುದಿಲ್ಲ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4