ಬೀದರ್: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಅತ್ಯಂತ ಸ್ವಾಗತಾರ್ಹವಾಗಿದೆ’ ಎಂದು ಬೀದರ್ ನಗರಸಭೆ ಸದಸ್ಯ ಸೂರ್ಯಕಾಂತ್ ಸಾದುರೆ ಬಣ್ಣಿಸಿದ್ದಾರೆ.
ಬೀದರ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿದ್ದಾರೆ. ನೂತನ ಹುಲಸೂರು, ಕಮಲನಗರ್, ಚಿಡಗುಪ್ಪ, ತಾಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕಾಗಿ ಅನುಮೋದನೆ ನೀಡಿದ್ದಾರೆ.
ಕ.ಕ.ಭಾಗದಲ್ಲಿ 24 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 7 ನಗರ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ 10 ಮೇಲ್ದರ್ಜೆಗೇರಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಸಮಾಜಮುಖಿ ಬಜೆಟ್ ಆಗಿದೆ.
ಎಲ್ಲ ವರ್ಗಗಳು, ಸಮುದಾಯಕ್ಕೂ ಅನುದಾನ ಕೊಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಒಳ್ಳೆಯ ಅನೇಕ ಯೋಜನೆ ಘೋಷಣೆ ಮಾಡಿದ್ದಾರೆ. ರಾಜ್ಯಕ್ಕೆ ಬರೋಬ್ಬರಿ 4.9 ಲಕ್ಷ ಕೋಟಿ ಬಜೆಟ್ ಕೊಟ್ಟಿದ್ದಾರೆ ಎಂದು ಬೀದರ್ ನಗರಸಭೆ ಸದಸ್ಯ ಸೂರ್ಯಕಾಂತ್ ಸಾದುರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4