ತುಮಕೂರು: ತುಮಕೂರು ನಗರವು ದಿನೇ ದಿನೇ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಹೆಚ್ಚಾಗುತ್ತಿರುವ ವಾಹನ ದಟ್ಟಣೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಅಪಘಾತಗಳನ್ನು ತಡೆಗಟ್ಟಲು ಮಹಾನಗರಪಾಲಿಕೆ ವ್ಯಾಪ್ತಿಯ ವಿವಿಧ ವಾರ್ಡುಗಳ ಮುಖ್ಯರಸ್ತೆಗಳಲ್ಲಿ 76 ಸೈಂಟಿಫಿಕ್ ಹಂಪ್ಸ್(ರಸ್ತೆ ಉಬ್ಬು), ಸ್ಪೀಡ್ ಬ್ರೇಕರ್ ಹಾಗೂ 31 ಆಟೋ ನಿಲ್ದಾಣಗಳನ್ನು ನಿರ್ಮಿಸಲು ಉದ್ದೇಶಿಸಿದ್ದು, ನಿರ್ಮಾಣಕ್ಕಗಿ ಸ್ಥಳವನ್ನು ಗುರುತಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ತಿಳಿಸಿದ್ದಾರೆ.
ಅದೇ ರೀತಿ ವಾರ್ಡ್ ನಂ. 4ರ ಗಾರ್ಡನ್ ರಸ್ತೆಯ ತಿರುಮಲ ಚೌಲ್ಟ್ರಿ ಹಾಗೂ ದಿಬ್ಬೂರು ಜಂಕ್ಷನ್ ಬಳಿ ಹೈಟ್ ಗೇಜ್ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4