ಬೆಳಗಾವಿ: ರಾಜ್ಯ ಮುಂಗಡಪತ್ರದಲ್ಲಿ ಒಂದು ಲಕ್ಷ ಕೋಟಿಗೂ ಅಧಿಕ ಸಾಲ ಮಾಡಲು ಪ್ರಸ್ತಾಪಿಸುವ ಮೂಲಕ ಅತಿ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿ ಎನ್ನುವ ದಾಖಲೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಟೀಕಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ನಾಲ್ಕು ಲಕ್ಷ ಕೋಟಿಗೂ ಅಧಿಕ ಮೊತ್ತದ ರಾಜ್ಯ ಮುಂಗಡಪತ್ರ ಮಂಡಿಸಿದ್ದು, ಅದರಲ್ಲಿ 1 ಲಕ್ಷ ಕೋಟಿ ರೂಪಾಯಿ ಸಾಲ ಪಡೆಯುವುದಾಗಿ ಉದ್ದೇಶಿಸಿದ್ದಾರೆ ಎಂದರು.
ಈ ಬಾರಿ ಒಂಭತ್ತೂವರೆ ಸಾವಿರ ಕೋಟಿ ರೂಪಾಯಿ ತೆರಿಗೆ ಸಂಗ್ರಹ ಕಡಿತವಾಗಲಿದೆ ಎಂದು ಅಂದಾಜು ಮಾಡಿದ್ದಾರೆ. ಮೂಲಸೌಕರ್ಯ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡಿದ್ದರೆ, ತೆರಿಗೆ ಕಡಿತ ಆಗುತ್ತಿರಲಿಲ್ಲ ಎಂದು ತಿಳಿಸಿದರು.
ಒಂದು ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಆ ಸಮುದಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಜೊತೆಗೆ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲಾತಿಯನ್ನು ನೀಡಲು ಪ್ರಸ್ತಾಪಿಸಿದ್ದಾರೆ. ಸಂವಿಧಾನ ರಚನಾ ಸಮಿತಿಯಲ್ಲಿ ಧರ್ಮಾಧಾರಿತ ಮೀಸಲಾತಿ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಲಾಗಿತ್ತು. ಆದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಕಿಡಿಕಾರಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4