ಛತ್ರಪತಿ ಸಂಭಾಜಿನಗರ: ಕಬ್ಬು ತುಂಬಿದ್ದ ಟ್ರಕ್ ಪಲ್ಟಿಯಾಗಿ ಆರು ಕಾರ್ಮಿಕರು ಸಾವನ್ನಪ್ಪಿ, 11 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಟ್ರಕ್ ಕನ್ನಡ್ ನಿಂದ ಪಿಶೋರ್ ಗೆ ಹೋಗುತ್ತಿದ್ದಾಗ ಪಿಶೋರ್ ಘಾಟ್ ನಲ್ಲಿ ಈ ಅಪಘಾತ ಸಂಭವಿಸಿದೆ. ಪಿಶೋರ್ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿದೆ. ಟ್ರಕ್ ನಲ್ಲಿ ಸುಮಾರು 17 ಕಾರ್ಮಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದ ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಕಬ್ಬಿನ ರಾಶಿಯ ಅಡಿಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟಿರುವುದು ಕಂಡುಬಂದಿದ್ದು, ಚಿಕಿತ್ಸೆಯ ಸಮಯದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4