ಜಾರ್ಖಂಡ್: ಭೀಕರ ಪಟಾಕಿ ಸ್ಫೋಟದಲ್ಲಿ ಮೂವರು ಮಕ್ಕಳ ಸಹಿತ ಐವರು ಸಜೀವ ದಹನಗೊಂಡು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನ ಗರ್ವಾ ಜಿಲ್ಲೆಯ ರಾಂಕಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋದರ್ಮಲಾ ಮಾರುಕಟ್ಟೆಯಲ್ಲಿ ನಡೆದಿದೆ.
ಐದು ಜನರು ಸಾವನ್ನಪ್ಪುವ ಮೊದಲು, ಸ್ಥಳೀಯರು ಅವರನ್ನು ಚಿಕಿತ್ಸೆಗಾಗಿ ಛತ್ತೀಸ್ ಗಢದ ರಾಮಾನುಜ್ ಗಂಜ್ ನಲ್ಲಿರುವ ಆಸ್ಪತ್ರೆಗೆ ಸಾಗಿಸಿದರು, ಆದರೆ, ಅವರೆಲ್ಲರೂ ಆಗಲೇ ಸಾವನ್ನಪ್ಪಿದ್ದರು.
ಘಟನೆಯಿಂದಾಗಿ ಇಡೀ ಪ್ರದೇಶವು ಪಟಾಕಿಗಳ ಶಬ್ದದಿಂದ ನಡುಗಿತು. ಬಾಂಬ್ ಸ್ಫೋಟಗೊಳ್ಳುತ್ತಿರುವಂತೆ ಕಾಣುತ್ತಿತ್ತು. ಐದು ಜನರು ಸಜೀವ ದಹನವಾಗಿದ್ದು ಸ್ಥಳದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕೂಡ ಬೆಂಕಿಗೆ ಆಹುತಿಯಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇನ್ನೂ ಗರ್ವಾ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯ ಬಗ್ಗೆ ಮುಖ್ಯಮಂತ್ರಿ ಹೇಮಂತ್ ಸೊರೇನ್ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4