ಶಿರಾ, ತಾಳಗುಂದ: ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ತಾಳಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಟನಹಳ್ಳಿ ಗ್ರಾಮದಲ್ಲಿ ಮಾನವೀಯತೆಯನ್ನು ತಲೆ ತಗ್ಗಿಸುವ ದಾರುಣ ಘಟನೆ ಬೆಳಕಿಗೆ ಬಂದಿದೆ. ನವಜಾತ ಹೆಣ್ಣು ಶಿಶುವನ್ನು ನಿರ್ದಯವಾಗಿ ಬೇಲಿಯಲ್ಲಿ ಬಿಸಾಕಿ ಹೋಗಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಸ್ಥಳೀಯ ನಿವಾಸಿಗಳು ಶಿಶುವಿನ ಅಳುವಿನ ಶಬ್ದ ಕೇಳಿ ಪರಿಶೀಲನೆ ನಡೆಸಿದಾಗ, ಅವರು ಒಂದು ಹೆಣ್ಣು ಮಗುವನ್ನು ಬಿಸಾಕಿರುವ ದೃಶ್ಯ ಕಂಡುಬಂದಿದೆ. ಕೂಡಲೇ ಈ ವಿಷಯವನ್ನು ಸ್ಥಳೀಯ ಗ್ರಾಮ ಪಂಚಾಯತಿ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.
ಈ ಹೀನಕೃತ್ಯ ಎಸಗಿದ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಶಿಶುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4