nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026
    Facebook Twitter Instagram
    ಟ್ರೆಂಡಿಂಗ್
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಸ್ಯೆಗಳ ಬಗ್ಗೆ ದೂರು ನೀಡಲು ಸಹಾಯವಾಣಿ ಕೇಂದ್ರ ಸ್ಥಾಪಿಸಿ : ಜಿಲ್ಲಾಧಿಕಾರಿ ಸೂಚನೆ
    ತುಮಕೂರು March 11, 2025

    ಸಮಸ್ಯೆಗಳ ಬಗ್ಗೆ ದೂರು ನೀಡಲು ಸಹಾಯವಾಣಿ ಕೇಂದ್ರ ಸ್ಥಾಪಿಸಿ : ಜಿಲ್ಲಾಧಿಕಾರಿ ಸೂಚನೆ

    By adminMarch 11, 2025No Comments2 Mins Read
    shubha kalyan

    ತುಮಕೂರು: ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸಮಸ್ಯೆಗಳಿಗೆ ಸಂಬಂಧಿಸಿದ ಸಾರ್ವಜನಿಕ ದೂರುಗಳನ್ನು ಸಲ್ಲಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ಸಂಜೆ ಕುಡಿಯುವ ನೀರು ಹಾಗೂ ಮೇವಿನ ಪರಿಸ್ಥಿತಿ ಕುರಿತಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಸಹಾಯವಾಣಿ ಕೇಂದ್ರವು ದಿನದ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆಯನ್ನು ತ್ವರಿತವಾಗಿ ವಿಶ್ಲೇಷಿಸಿ, ಅಗತ್ಯವಿದ್ದಾಗ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು. ಸಹಾಯವಾಣಿ ಕೇಂದ್ರದಲ್ಲಿ ದಾಖಲಾಗುವ ಸಾರ್ವಜನಿಕರ ಸಮಸ್ಯೆ ಹಾಗೂ ಪರಿಹಾರ ಕ್ರಮದ ವರದಿಯನ್ನು ಪ್ರತಿದಿನ ತಮಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು.


    Provided by
    Provided by

    ಕುಡಿಯುವ ನೀರಿನ ಸಮಸ್ಯೆ ತಲೆದೋರಿದಾಗ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಜನ–ಜಾನುವಾರುಗಳಿಗೆ ನೀರಿನ ಪೂರೈಕೆ, ಶುದ್ಧೀಕರಣ ಮತ್ತು ಲಭ್ಯತೆ ಬಗ್ಗೆ ಮುಂದಿನ ಸಭೆಯಲ್ಲಿ ಮಾಹಿತಿ ನೀಡಬೇಕು ಸೂಚನೆ ನೀಡಿದರು.

    ಕೊಳವೆ ಬಾವಿ ಕೊರೆದು 3/4 ತಿಂಗಳಾದರೂ ವಿದ್ಯುತ್ ಸರಬರಾಜು ಸಂಪರ್ಕವಿಲ್ಲದೆ ಹಲವಾರು ಕೊಳವೆ ಬಾವಿಗಳು ಬತ್ತಿ ಹೋಗಿವೆ. ಇಂತಹ ಪ್ರಕರಣಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿಯಮಿತವಾಗಿ ಪರೀಕ್ಷಿಸಬೇಕು. ದುರಸ್ತಿಯಲ್ಲಿರುವ ನೀರಿನ ಘಟಕಗಳನ್ನು ತ್ವರಿತವಾಗಿ ಸರಿಪಡಿಸಬೇಕು ಎಂದು ನಿರ್ದೇಶಿಸಿದರು.

    ನಂತರ ಮಾತನಾಡಿದ ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ನಗರ ವ್ಯಾಪ್ತಿಯಲ್ಲಿ ಪ್ರಸ್ತುತ ಯಾವುದೇ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ. ಸಹಾಯವಾಣಿ ಕೇಂದ್ರದಲ್ಲಿ ಈವರೆಗೂ 88 ದೂರುಗಳು ದಾಖಲಾಗಿದ್ದು, ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಪಶು ವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಗಿರೀಶ್ಬಾಬು ರೆಡ್ಡಿ ಸಭೆಗೆ ಮಾಹಿತಿ ನೀಡುತ್ತಾ ಜಾನುವಾರುಗಳಿಗೆ ಸದ್ಯಕ್ಕೆ ಮೇವಿನ ಕೊರತೆ ಇರುವುದಿಲ್ಲ. ಮೇವು ಉತ್ಪಾದಿಸಲು ನೀರಾವರಿ ಸೌಲಭ್ಯ ಹೊಂದಿರುವ ರೈತರಿಗೆ ಮೇವಿನ ಬೀಜದ ಮಿನಿ ಕಿಟ್ಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳು ಡಾ.ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿಗಳು, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ, ಬೆಸ್ಕಾಂ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ತಹಶೀಲ್ದಾರರು ಹಾಗೂ ಮತ್ತಿತರರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ

    February 5, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ತುಮಕೂರು: ಸಬ್ಸಿಡಿ ರೂಪದಲ್ಲಿ ಸಾಲ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರು ನಗರದ ಸೈಬರ್…

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.