ತಿಪಟೂರು: ತಾಲೂಕಿನ ಕಸಬಾ ಹೋಬಳಿಯ, ಗುಡಿಗೊಂಡನಹಳ್ಳಿ ಪಂಚಾಯಿತಿ ವ್ಯಾಪ್ತಿಯ ಮಾರುಗೊಂಡನಹಳ್ಳಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಈ ಘಟನೆಯ ಬೆನ್ನಲ್ಲೇ ಹಲವಾರು ಅನುಮಾನಗಳು ಸೃಷ್ಟಿಯಾಗಿವೆ.
ಬಸವರಾಜು(40) ಮೃತದುರ್ದೈವಿಯಾಗಿದ್ದಾರೆ. ಮಂಗಳವಾರ ಬೆಳಗ್ಗೆ 9:30ರ ಸಮಯದಲ್ಲಿ ಮನೆಯಿಂದ ಹೊರಗೆ ಹೋದ ಇವರು ಸಂಜೆ 5 ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾರೆ.
ಮೃತ ಬಸವರಾಜುಗೆ ಒಬ್ಬಳು ಹೆಂಡತಿ ಇಬ್ಬರು ಗಂಡು ಮಕ್ಕಳಿದ್ದು, ಕುರಿ ಕಾಯುವ ಕೆಲಸವನ್ನು ಮಾಡುತ್ತಿದ್ದರು. ಮೃತದೇಹದ ಮೇಲೆ ಗಾಯದ ಗುರುತುಗಳು ಹಾಗೂ ಅಲ್ಲಲ್ಲೇ ಚರ್ಮ ಕಿತ್ತು ಹೋಗಿರುವುದು ಕಂಡು ಬಂದಿದೆ. ಹೀಗಾಗಿ ಇದು ಸಾವು ಸಹಜವಲ್ಲ ಎಂದು ಸಂಬಂಧಿಕರು ಹಾಗೂ ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಘಟನೆ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4